ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ಮೋದಿ ವಿದೇಶಿ ಪ್ರವಾಸಕ್ಕೆ ಕಾಂಗ್ರೆಸ್ ಸಹಿತ ಕೆಲವು ವಿಪಕ್ಷಗಳು ಅಸಮಾಧಾನ ಹೊರಹಾಕಿದ್ದು, ಇದರ ನಡುವೆ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ನಾಯಕ ಶರದ್ ಪವಾರ್ ಮೆಚ್ಚುಗೆ ವುಕ್ತಪಡಿಸಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪವಾರ್, ಯಾವುದೇ ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ, ಅದು ರಾಷ್ಟ್ರೀಯ ಪ್ರತಿಷ್ಠೆಗೆ ಧಕ್ಕೆಯನ್ನು ಉಂಟು ಮಾಡಬಾರದು ಎಂದು ಹೇಳಿದ್ದಾರೆ.
ರಾಷ್ಟ್ರ ಗೌರವ ವಿಚಾರದಲ್ಲಿ ಭಿನ್ನಾಭಿಪ್ರಾಯ ಬೇಡ
ಇಂದು ಪ್ರಧಾನಿ ಮೋದಿ ಅವರು ದೇಶದ ಹೊರ ಭಾಗದಲ್ಲಿ ಭಾರತದ ಪ್ರತಿಷ್ಠೆಯನ್ನು ರಕ್ಷಿಸಲು ಕೆಲಸ ಮಾಡುತ್ತಿದ್ದಾರೆ. ನಮ್ಮಲ್ಲಿ ಏನೇ ವಿಭಿನ್ನ ರಾಜಕೀಯ ಭಿನ್ನಾಭಿಪ್ರಾಯಗಳಗಳು ಇದ್ದರೂ ,ರಾಷ್ಟ್ರದ ಗೌರವದ ವಿಷಯಕ್ಕೆ ಬಂದಾಗ ಜೊತೆಯಾಗಬೇಕು ಎಂದು ಪವಾರ್ ಹೇಳಿದ್ದಾರೆ.
ಪ್ರಧಾನಿಗಳ ಪ್ರವಾಸವನ್ನು ಪ್ರಶ್ನಿಸಿದ ಕಾಂಗ್ರೆಸ್
ಪ್ರಧಾನಿ ಮೋದಿ ಅವರ ಐದು ದೇಶಗಳ ಪ್ರವಾಸಕ್ಕೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರೋಧ ವ್ಯಕ್ತ ಪಡಿಸಿದ್ದರು. ದೇಶ ಎದುರಿಸಲಿರುವ ಆರ್ಥಿಕ ಆಘಾತವನ್ನು ಸಾಮಾನ್ಯ ಪ್ರಜೆ ಅನುಭವಿಸಲಿದ್ದಾನೆ ಎಂದು ಹೇಳಿದ್ದರು.



