May 21, 2026
Thursday, May 21, 2026
spot_img

WEATHER | ರಾಜ್ಯದಲ್ಲಿ ಇಂದು ಕೂಡ ಕರಾವಳಿ-ಮಲೆನಾಡಿನಲ್ಲಿ ಮಳೆ ಮುಂದುವರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಇಂದು ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜಧಾನಿ ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳು ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ವೇಗವಾಗಿ ಗಾಳಿ ಕೂಡ ಬೀಸುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಬಾಗಲಕೋಟೆ ಸೇರಿದಂತೆ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲೂ ಸಾಧಾರಣದಿಂದ ಭಾರಿ ಮಳೆಯಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !