May 21, 2026
Thursday, May 21, 2026
spot_img

ಸಿಲಿಕಾನ್ ಸಿಟಿಗೆ ಮಳೆ ಗಂಡಾಂತರ: ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಾದ್ಯಂತ ಇಂದಿನಿಂದ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರಾಜಧಾನಿ ಬೆಂಗಳೂರಿನಲ್ಲಿ ಇಂದು ‘ಆರೆಂಜ್ ಅಲರ್ಟ್’ ಹಾಗೂ ಮುಂದಿನ ಮೂರು ದಿನಗಳ ಕಾಲ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

ಜಿಲ್ಲಾವಾರು ಮಳೆ ಮುನ್ಸೂಚನೆ ವಿವರ:

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಯಚೂರು, ಯಾದಗಿರಿ, ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಜಾರಿಯಲ್ಲಿದೆ. ಉಳಿದ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಗದಗ, ಕೊಪ್ಪಳ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮುಂದುವರಿಯಲಿದ್ದು, ಇತರ 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ.

ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಹಾಗೂ ಉತ್ತರ ಒಳನಾಡಿನ 19 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !