July 18, 2026
Saturday, July 18, 2026
spot_img

ಮೇಕೆದಾಟು ಅಣೆಕಟ್ಟು ಯೋಜನೆ ಹೊಸ ಡಿಪಿಆರ್: ಕೇಂದ್ರಕ್ಕೆ ಸಲ್ಲಿಸಿ, ಒಪ್ಪಿಗೆ ಸಿಕ್ಕ ಕೂಡಲೇ ಚಾಲನೆ: ಡಿಕೆಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಮೇಕೆದಾಟು ಅಣೆಕಟ್ಟು ಯೋಜನೆಗೆ ಹೊಸದಾಗಿ ವಿವರವಾದ ಯೋಜನಾ ವರದಿ-ಡಿಪಿಆರ್ ತಯಾರಾಗಿದ್ದು, ಶೀಘ್ರದಲ್ಲೇ ಕೇಂದ್ರಕ್ಕೆ ಸಲ್ಲಿಸಲಾಗುವುದು. ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟ ಕೂಡಲೇ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಯೋಜನೆ ಅನುಷ್ಠಾನಕ್ಕೆ ಪ್ರತ್ಯೇಕ ಕಚೇರಿ

ಚಾಮರಾಜನಗರದ ಕೊಳ್ಳೇಗಾಲ ತಾಲ್ಲೂಕಿನ ಶಿವನಸಮುದ್ರ ಗ್ರಾಮದ ಹೆಲಿಪ್ಯಾಡ್‌ನಲ್ಲಿ ಮಾತನಾಡಿದ ಅವರು, ಈ ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಅರ್ಜಿಯನ್ನು ಕೇಂದ್ರ ಜಲ ಆಯೋಗ-CWC ಈಗಾಗಲೇ ವಜಾ ಮಾಡಿದೆ. ಈ ಯೋಜನೆ ಅನುಷ್ಠಾನಕ್ಕೆ ಪ್ರತ್ಯೇಕ ಕಚೇರಿ ತೆರೆಯಲಾಗಿದ್ದು, ಅರಣ್ಯಕ್ಕೆ ಪರ್ಯಾಯ ಭೂಮಿ ನೀಡಲು ಭೂಮಿ ಗುರುತಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ರಾಜ್ಯ ಸರ್ಕಾರ ಚಾಮರಾಜನಗರ ಜಿಲ್ಲೆಗೆ ವಿಶೇಷ ಕೊಡುಗೆ ನೀಡಿದೆ. ಕೈಗಾರಿಕೋಧ್ಯಮಕ್ಕೆ ಹೆಚ್ಚಿನ ಒತ್ತು ನೀಡುವ ಸಲುವಾಗಿ ಕೈಗಾರಿಕಾ ವಸಾಹತು ವಿಸ್ತರಣೆಗೆ ಇದ್ದ ಅಡೆತಡೆ ಸರಪಡಿಸಲಾಗಿದೆ. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ಪರಿಹಾರ ಕಲ್ಪಿಸಲು ಆದ್ಯತೆ ನೀಡಲಾಗಿದೆ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !