May 21, 2026
Thursday, May 21, 2026
spot_img

ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಗೆ ಕೋರಿ ಪಿಐಎಲ್ ಅರ್ಜಿ: ಸಿದ್ದು ಸರ್ಕಾರಕ್ಕೆ ಹೈಕೋರ್ಟ್‌ ನಿಂದ ನೊಟೀಸ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಕಾಂಗ್ರೆಸ್ ಸರಕಾರದ ಪ್ರಮುಖ ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಬಿಡುಗಡೆಗೆ ಬಾಕಿ ಇದ್ದು, ಈ ಸಂಬಂಧ ಸೂಕ್ತ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್‌, ಸಿದ್ದು ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ.

ಎರಡು ತಿಂಗಳಿನಿಂದ ಹಣ ಬಿಡುಗಡೆಯಾಗಿಲ್ಲ

ಬೆಂಗಳೂರಿನ ಮಲಾನಗರದ ನಿವಾಸಿ ಆರ್. ಗಂಗಾ ಹಾಗೂ ನಂದಿನಿ ಲೇಔಟ್‌ನ ಪವಿತ್ರಾ ಎಂಬುವರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದು,
ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಖಾತೆಗೆ ಜಮೆಯಾಗಿಲ್ಲ. ಈ ಕುರಿತು ತಕ್ಷಣವೇ ಪಾವತಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ವಿವರಣೆ ಕೋರಿ ತುರ್ತು ನೊಟೀಸ್ ಜಾರಿ

ಈ ಕುರಿತು ನ್ಯಾಯಮೂರ್ತಿಗಳಾದ ಡಾ. ಕೆ ಮನ್ಮಥ ರಾವ್‌ ಮತ್ತು ಸೂರಜ್ ಗೋವಿಂದರಾಜ್​​ ಅವರಿದ್ದ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆಸಿ, ರಾಜ್ಯ ಹಣಕಾಸು ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ವಿವರಣೆ ಕೋರಿ ತುರ್ತು ನೊಟೀಸ್ ಜಾರಿ ಮಾಡಲು ಆದೇಶಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !