ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದ ಫಾಲ್ಟಾ ವಿಧಾನಸಭಾ ಕ್ಷೇತ್ರದಲ್ಲಿ ಬಿಗಿ ಭದ್ರತೆಯಲ್ಲಿ ಇಂದು ಶಾಂತಿಯುತ ಮತದಾನ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 6 ಗಂಟೆ ವೇಳೆಗೆ ಮುಕ್ತಾಯಗೊಂಡಿದೆ. 87.73% ಮತದಾನ ದಾಖಲಾಗಿದೆ.
285 ಮತಗಟ್ಟೆಗಳಲ್ಲಿ ಮರುಮತದಾನ
ರಾಜ್ಯದಲ್ಲಿ ಎಪ್ರಿಲ್ 29ರಂದು ನಡೆದಿದ್ದ ಎರಡನೇ ಹಂತದ ವಿಧಾನಸಭಾ ಚುನಾವಣಾ ಮತದಾನದಲ್ಲಿ ಫಾಲ್ಟಾ ಕ್ಷೇತ್ರದಲ್ಲಿ ಚುನಾವಣಾ ಅಪರಾಧ ಪ್ರಕರಣಗಳು ವರದಿಯಾಗಿದ್ದ ಹಿನ್ನೆಲೆ 285 ಮತಗಟ್ಟೆಗಳಲ್ಲಿ ಮರುಮತದಾನ ನಡೆಸಲು ಭಾರತೀಯ ಚುನಾವಣಾ ಆಯೋಗ ಆದೇಶಿಸಿತ್ತು.
ಬಿಜೆಪಿ ಅಭ್ಯರ್ಥಿಗೆ ಗೆಲುವಿನ ವಿಶ್ವಾಸ
ಕ್ಷೇತ್ರದಲ್ಲಿ ಟಿಎಂಸಿಯ ಜಹಾಂಗೀರ್ ಖಾನ್ ಸೇರಿದತೆ ಆರು ಅಭ್ಯರ್ಥಿಗಳು ಕಣದಲ್ಲಿದ್ದರು. ಆದರೆ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಜಹಾಂಗೀರ್ ಖಾನ್ ಅವರು ಮೇ 19 ರಂದೇ ಮರು ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ ಎಂದು ಘೋಷಿಸಿದ್ದರು. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ದೇಬಾಂಗ್ಶು ಪಾಂಡ ಗೆಲುವು ಸಾಧಿಸುವ ವಿಶ್ವಾಸ ಹೊಂದಿದ್ದಾರೆ. ಈ ಕುರಿತು ಮೇ 24 ರಂದು ಫಲಿತಾಂಶ ಪ್ರಕಟವಾಗಲಿದೆ.



