May 21, 2026
Thursday, May 21, 2026
spot_img

ಹಿರಿಯೂರು ಕ್ಷೇತ್ರದ ಉಪಚುನಾವಣೆ ಮೇಲೆ ಕಣ್ಣು: ಬಿಜೆಪಿ ಸೇರಿದ ಪ್ರಬಲ ನಾಯಕ ರಾಜಣ್ಣ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಹಿರಿಯೂರು ವಿಧಾನಸಭಾ ಕ್ಷೇತ್ರದ ಶಾಸಕ, ಸಚಿವ ಡಿ. ಸುಧಾಕರ್ ಅವರ ಅಕಾಲಿಕ ನಿಧನದಿಂದಾಗಿ ತೆರೆವಾದ ಸ್ಥಾನಕ್ಕೆ ಉಪಚುನಾವಣೆ ಎದುರಾಗಿದೆ. ರಾಜಕೀಯ ಚಟುವಟಿಕೆ
ಬಿರುಸುಗೊಂಡಿದೆ.

ಅತ್ತ ಜೆಡಿಎಸ್​​ನಿಂದ ಅಭ್ಯರ್ಥಿ ಕಣಕ್ಕಿಳಿಸಲು ಕಸರತ್ತು ನಡೆದಿದ್ದು, ಮತ್ತೊಂದೆಡೆ ಬಿಜೆಪಿಯು ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಲು ಪ್ಲಾನ್ ಮಾಡಿಕೊಂಡಿದೆ.

ಬಿಜೆಪಿಗೆ ರಾಜಣ್ಣ ಬಲ

ಹಿರಿಯೂರಿನಲ್ಲಿ ಕಾಡು ಗೊಲ್ಲ ಸಮುದಾಯ ಹೆಚ್ಚಿದ್ದು, ಹೀಗಾಗಿ ಈ ಸಮುದಾಯ ಅಭ್ಯರ್ಥಿ ಕಣಕ್ಕಿಳಿಸಲು ಬಿಜೆಪಿ ಸಿದ್ದತೆ ನಡೆಸುತ್ತಿದೆ. ಇದಕ್ಕೆ ಪೂರಕ ಎಂಬಂತೆ
ರಾಜ್ಯ ಕಾಡುಗೊಲ್ಲರ ಸಂಘದ ಅಧ್ಯಕ್ಷರಾದ ರಾಜಣ್ಣ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಹಿರಿಯೂರು ಕ್ಷೇತ್ರದ ಸ್ಪರ್ಧೆಗೆ ಪ್ರಬಲ ಆಕಾಂಕ್ಷೆಯಾಗಿರುವ ರಾಜಣ್ಣ ಅವರು ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದ ಗೋವಿಂದ ಕಾರಜೋಳ, ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ, ಮೈಸೂರು ಸಂಸದ ಯದುವೀರ್ ಒಡೆಯರ್, ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಂತಹ ಘಟಾನುಘಟಿ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದ್ದಾರೆ.

ಈ ಬಾರಿ ಹಿರಿಯೂರು ಮೇಲೆ ಜೆಡಿಎಸ್ ಕಣ್ಣು

ಆದರೆ ಅತ್ತ ಹಿರಿಯೂರು ಕ್ಷೇತ್ರದ ಮೇಲೆ ಈ ಬಾರಿ ಪ್ರಾದೇಶಿಕ ಪಕ್ಷ ಜೆಡಿಎಸ್ ಕಣ್ಣಿಟ್ಟಿದ್ದು, ಈ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ನವರನ್ನೇ ಕಣಕ್ಕಿಳಿಸಲು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬಯಸಿದ್ದಾರೆ ಎಂಬ ಕೇಳಿಬರುತ್ತಿದೆ. ಇನ್ನೊಂದೆಡೆ ಬಿಜೆಪಿ ಸಹ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿದ್ದು, ಹೀಗಾಗಿ ಈ ಬಾರಿ ರೋಚಕತೆಯಿಂದ ಕೂಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !