May 22, 2026
Friday, May 22, 2026
spot_img

WEATHER | ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆಯ ಅಬ್ಬರ, ಬರೋಬ್ಬರಿ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಿಸಿಲಿನಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಇದೀಗ ಮಳೆಯ ದರುಶನವಾಗುತ್ತಿದೆ. ಇನ್ನೂ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ ಸುರಿಯಲಿದ್ದು, ಬರೋಬ್ಬರಿ 19 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನು ಎಂಟು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಕೂಡ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ನಿನ್ನೆ ತಡರಾತ್ರಿ ಜೋರು ಮಳೆ ಸುರಿದಿದ್ದು, ಬೆಳಗ್ಗೆ ತಂಪಿನ ವಾತಾವರಣ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ತುಮಕೂರು, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಸೇರಿದಂತೆ 8 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !