ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ನಲ್ಲಿ ಇಂದು ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದು, ಅಗ್ರಸ್ಥಾನಕ್ಕೇರಲು ಈ ಪಂದ್ಯ ಹೆಚ್ಚು ಮಹತ್ವ ಪಡೆದಿದೆ. ನಾಯಕ ಪ್ಯಾಟ್ ಕಮಿನ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಎರಡು ತಂಡಕ್ಕೂ ಗೆಲುವು ಅನಿವಾರ್ಯ
ಹೈದರಾಬಾದ್ ತಂಡ 16 ಅಂಕಗಳನ್ನ ಹೊಂದಿದ್ದು, ಈ ಪಂದ್ಯವನ್ನ ಗೆದ್ದರೆ 18 ಆಗಲಿದೆ. ಇತ್ತ ಆರ್ಸಿಬಿ ಪ್ರಸ್ತುತ 18 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಆರ್ಸಿಬಿ ಗೆಲುವು ಸಾಧಿಸಿದರೆ ಮೊದಲ ಸ್ಥಾನ ಮತ್ತು ಫೈನಲ್ ಹಾದಿ ತೆರೆಯುತ್ತದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ವೆಂಕಟೇಶ್ ಅಯ್ಯರ್, ರಜತ್ ಪಾಟಿದಾರ್ (c), ದೇವದತ್ ಪಡಿಕ್ಕಲ್, ಜಿತೇಶ್ ಶರ್ಮಾ (WK), ಕೃನಾಲ್ ಪಾಂಡ್ಯ, ರೊಮಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಸುಯಶ್ ಶರ್ಮಾ, ರಸಿಕ್ ಸಲಾಂ
ಸನ್‌ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್ (ವಿಕೀ), ಹೆನ್ರಿಚ್ ಕ್ಲಾಸೆನ್, ಸಲೀಲ್ ಅರೋರಾ, ಸ್ಮರಣ್ ರವಿಚಂದ್ರನ್, ನಿತೀಶ್ ಕುಮಾರ್ ರೆಡ್ಡಿ, ಪ್ಯಾಟ್ ಕಮಿನ್ಸ್ (ನಾಯಕ), ಶಿವಂಗ್ ಕುಮಾರ್, ಈಶಾನ್ ಮಾಲಿಂಗ, ಸಕಿಬ್ ಹುಸೇನ್



