ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ಅನೇಕ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯ ಸಾಧ್ಯತೆ ಹೆಚ್ಚಿರುವ ಹಿನ್ನೆಲೆ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
2 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಉತ್ತರ ಒಳನಾಡಿನ ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ ತೀವ್ರ ಮಳೆಯ ಜೊತೆಗೆ ಗಂಟೆಗೆ 50ರಿಂದ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈ ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ:
ಬೆಂಗಳೂರಿಗೂ ಯೆಲ್ಲೋ ಅಲರ್ಟ್
ರಾಜಧಾನಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಧಾರಣದಿಂದ ಭಾರೀ ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ವಿಜಯನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ದಾವಣಗೆರೆ, ರಾಮನಗರ ಸೇರಿದಂತೆ ಒಟ್ಟು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮೇ 25ರವರೆಗೆ ಮಳೆ ಮುಂದುವರಿಕೆ
ಮೇ 25ರವರೆಗೆ ರಾಜ್ಯದ ಹಲವೆಡೆ ಗುಡುಗು-ಸಿಡಿಲಿನ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಒಳನಾಡು ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.



