September 8, 2026
Tuesday, September 8, 2026
spot_img

ಕಾಂಗ್ರೆಸ್ ಸರಕಾರದಿಂದ ಜನತೆಗೆ ವಂಚನೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಟೀಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕಳೆದ ಮೂರು ವರ್ಷಗಳಿಂದ ಈ ರಾಜ್ಯದ ಜನತೆಗೆ ಕಾಂಗ್ರೆಸ್ ಸರಕಾರವು ವಂಚಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಭಾನುವಾರ ಟೀಕಿಸಿದ್ದಾರೆ.

ಕಾಂಗ್ರೆಸ್ ಒಳಜಗಳವೇ ಹೆಚ್ಚು

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಂದು ರಾಜ್ಯದಲ್ಲಿ ಕಾಂಗ್ರೆಸ್ ಒಳಜಗಳವೇ ಹೆಚ್ಚುತ್ತಿದ್ದು, ಇದರಿಂದಾಗಿ ಜನಹಿತದ ಕೆಲಸಗಳನ್ನು ಕಡೆಗಣಿಸಿದ್ದಾರೆ. ಈ ಸರಕಾರಕ್ಕೆ ಜನರ ಅಭಿವೃದ್ದಿಯ ಕುರಿತು ಯಾವುದೇ ಸಂಬಂಧ ಇಲ್ಲದಂತಾಗಿದೆ ಎಂದು ವಾಗ್ದಾಳಿ ನಡೆಸಿದರು.

ದೆಹಲಿ ಕಾಂಗ್ರೆಸ್ಸಿನ ಎಟಿಎಂ

ಇಲ್ಲಿನ ಸರಕಾರ ದೆಹಲಿ ಕಾಂಗ್ರೆಸ್ಸಿನ ಎಟಿಎಂ ಆಗಿದೆ. ಕೇವಲ ತಮ್ಮ ಹಿತಕ್ಕೆ ಸರಕಾರವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !