September 10, 2026
Thursday, September 10, 2026
spot_img

ಭಟ್ಕಳ ನದಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ಹೆಕ್ಕಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ನಿನ್ನೆಯವರೆಗೂ ಹತ್ತು ಮೃತದೇಹಗಳು ಪತ್ತೆಯಾಗಿದ್ದವು, ಇದೀಗ ಹನ್ನೊಂದನೆಯ ಮೃತದೇಹ ಪತ್ತೆಯಾಗಿದೆ.

ಮೃತರನ್ನು ಮಾದೇವ್‌ ನಾಯ್ಕ್‌ ಎಂದು ಗುರುತಿಸಲಾಗಿದೆ. ಬೆಳಗ್ಗೆ ಎನ್‌ಡಿಆರ್‌ಎಫ್‌ ತಂಡ ಶೋಧ ನಡೆಸುತ್ತಿದ್ದಾಗ ಮಾದೇವ್‌ ನಾಯ್ಕ್‌ ಮೃತದೇಹ ಪತ್ತೆಯಾಗಿದೆ. ನದಿಯಲ್ಲಿ ನೀರು ಕಡಿಮೆ ಇದ್ದ ಕಾರಣ ತಂಡಗಳೆಲ್ಲ ಕೂಡ ಮೃತದೇಹವನ್ನು ಹೊರಕ್ಕೆ ತೆಗೆದಿದ್ದಾರೆ.

ಮಾದೇವ್‌ ನಾಯ್ಕ್‌ ಅವರ ಪತ್ನಿ ಲಕ್ಷ್ಮಿ ನಾಯ್ಕ್‌ ಕೂಡ ಈ ಅಪಘಾತದಲ್ಲಿ ಮೃತಪಟ್ಟಿದ್ದು, ಇಬ್ಬರು ಹೆಣ್ಣು ಮಕ್ಕಳು ಅನಾಥರಾಗಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !