September 10, 2026
Thursday, September 10, 2026
spot_img

ಬಕ್ರೀದ್‌ಗೆ ಯುಪಿನಲ್ಲಿ ಬಿಗ್ ರೂಲ್ಸ್: ರಸ್ತೆ ನಮಾಜ್‌, ಸಾರ್ವಜನಿಕ ಕುರ್ಬಾನಿಗೆ ಯೋಗಿ ಫುಲ್ ಸ್ಟಾಪ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮತ್ತು ಪ್ರಾಣಿ ಬಲಿಗೆ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ರಸ್ತೆಗಳಲ್ಲಿ ಪ್ರಾರ್ಥನೆಗೆ ನಿರ್ಬಂಧ

ಈದ್ ಅಲ್-ಅಧಾ ದಿನದಂದು ಮಸೀದಿ ಮತ್ತು ನಿಗದಿತ ಈದ್ಗಾ ಆವರಣಗಳಲ್ಲೇ ಪ್ರಾರ್ಥನೆ ನಡೆಸಬೇಕು ಎಂದು ಸರ್ಕಾರ ಹೇಳಿದೆ. ರಸ್ತೆ, ಪಾರ್ಕ್ ಹಾಗೂ ಇತರ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡಲು ಅವಕಾಶ ಇರುವುದಿಲ್ಲ ಎಂದು ಸೂಚಿಸಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಬಲಿ ನಿಷೇಧ

ತೆರೆದ ಪ್ರದೇಶಗಳಲ್ಲಿ ‘ಕುರ್ಬಾನಿ’ ನಡೆಸಬಾರದು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ನಿಷೇಧಿತ ಪ್ರಾಣಿಗಳ ಬಲಿಯನ್ನು ಸಂಪೂರ್ಣವಾಗಿ ತಡೆಯಲು ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ. ಪ್ರಾಣಿ ಬಲಿಯ ಬಳಿಕ ಯಾವುದೇ ರೀತಿಯ ಅಶುಚಿತ್ವ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ನಗರ ಪ್ರದೇಶಗಳಲ್ಲಿ ತಕ್ಷಣ ಸ್ವಚ್ಛತಾ ಕಾರ್ಯ ನಡೆಸಲು ಸೂಚಿಸಲಾಗಿದೆ.

ಇದನ್ನೂ ಓದಿ:

ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಕಠಿಣ

ಹಬ್ಬದ ಸಂದರ್ಭ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಪಡೆಗಳನ್ನು ನಿಯೋಜಿಸಲಾಗುತ್ತಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾ ಹಾಗೂ ಡ್ರೋನ್‌ಗಳ ಮೂಲಕ ನಿಗಾ ವಹಿಸಲು ಸರ್ಕಾರ ಆದೇಶಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !