July 21, 2026
Tuesday, July 21, 2026
spot_img

ಶಿಕ್ಷಕರ ದಿನಾಚರಣೆ: ಕೊಡಗು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ

ಹೊಸದಿಗಂತ ವರದಿ, ಮಡಿಕೇರಿ:

ಪ್ರಸಕ್ತ (2025-26ನೇ) ಸಾಲಿನ ಸಾಲಿನ ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ಐದು ತಾಲೂಕುಗಳ 9ಮಂದಿ ಶಿಕ್ಷಕ-ಶಿಕ್ಷಕಿಯರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮಡಿಕೇರಿ ತಾಲೂಕಿನಿಂದ ಮೊಣಕಾಲ್ಮುರಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಾಲಿನಿ ಕೆ.ಆರ್.,ಅರೆಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೀನಾಕ್ಷಿ ಎ.ಡಿ., ಹಾಕತ್ತೂರು ಪ್ರೌಢಶಾಲೆಯ ವನಜ ಎಂ. ಅವರು ಪ್ರಶಸ್ತಿ ಪಡೆಯಲಿದ್ದಾರೆ
ಸೋಮವಾರಪೇಟೆ ಹಾಗೂ ಕುಶಾಲನಗರ ತಾಲೂಕುಗಳಿಂದ ಬಡುಬನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಜಾನ್ಸಿ ಕೆ.ವಿ.,ಕೂಡಿಗೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಯೋಗೇಶ್ ಎಸ್.ಎ, ಕೊಡ್ಲಿಪೇಟೆ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ಶಿಕ್ಷಕ ಅಬ್ದುಲ್ ರಬ್ ಎಂ.ಎಸ್. ಪ್ರಶಸ್ತಿಗೆ ಭಾಜನರಾಗಿದ್ದಾರೆ.

ವೀರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕುಗಳಿಂದ ಎಮ್ಮೆಗುಂಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎ.ಕೆ. ಮಾಚಯ್ಯ, ಚೆನ್ನಂಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುಷ್ಮಾ ಕೆ.ಕೆ., ದೇವಣಗೇರಿ ಬಿ.ಸಿ. ಪ್ರೌಢಶಾಲೆಯ ಹೆಚ್.ಡಿ. ಲೋಕೇಶ್ ಪ್ರಶಸ್ತಿ ಪಡೆಯಲಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !