ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಭಾಗದ ರೈಲು ನಿಲ್ದಾಣದ ಬಳಿ ಅಪಘಾತ ಸಂಭವಿಸಿದ್ದು, ಅಪ್ಪ ಅಮ್ಮ ಹಾಗೂ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೊಮ್ಮನಾಳ ನಿವಾಸಿಗಳಾದ ಮಹಾಂತೇಶ್ ಮಾನೆ, ಸಾಕ್ಷಿ ಮಾನೆ ಹಾಗು ಇನ್ನೂ ಹೆಸರಿಡದ ಆರು ತಿಂಗಳ ಮಗು ಮೃತಪಟ್ಟಿದೆ. ಪತಿ, ಪತ್ನಿ ಹಾಗೂ ಮಗು ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಆಟೋ ಬಂದು ಗುದ್ದಿದೆ ಎನ್ನಲಾಗಿದೆ. ಇಡೀ ಕುಟುಂಬ ನೆಲಕ್ಕೆ ಬಿದ್ದಿದ್ದು, ತಕ್ಷಣವೇ ಮೃತಪಟ್ಟಿದ್ದಾರೆ.
ಮೃತರ ಕುಟುಂಬದವರಿಗೆ ಈ ಸಾವಿನ ಸುದ್ದಿ ಆಘಾತವಾಗಿದ್ದು, ಆಕ್ರಂದನ ಮುಗಿಲು ಮುಟ್ಟಿದೆ.