ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಧರ್ಮಶಾಲಾ ಮೈದಾನ ಸಜ್ಜಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದ ಗುಜರಾತ್ ಟೈಟನ್ಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಗೆದ್ದರೆ ಫೈನಲ್ ಗೆ ಎಂಟ್ರಿ
ಈ ಪಂದ್ಯದಲ್ಲಿ ಗೆದ್ದ ತಂಡ ಫೈನಲ್ಗೆ ಎಂಟ್ರಿ ನೀಡಲಿದ್ದು, ಸೋತ ತಂಡ ಎರಡನೇ ಕ್ವಾಲಿಫೈಯರ್ ಪಂದ್ಯ ಎದುರಿಸಬೇಕಿದೆ.
ಹಾಲಿ ಚಾಂಪಿಯನ್ ಆರ್ ಸಿಬಿ ಉತ್ತಮ ನೆಟ್ ರನ್ ರೇಟ್ ನಿಂದಾಗಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದರೆ, ಜಿಟಿ ಎರಡನೇ ಸ್ಥಾನ ಪಡೆದುಕೊಂಡಿತ್ತು.
ಎರಡು ಟೀಮ್ ಸಜ್ಜು
ಗುಜರಾತ್ ಟೈಟಾನ್ಸ್: ಶುಭಮನ್ ಗಿಲ್ (ನಾಯಕ), ಬಿ ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೀ), ನಿಶಾಂತ್ ಸಿಂಧು, ವಾಷಿಂಗ್ಟನ್ ಸುಂದರ್, ಜೇಸನ್ ಹೋಲ್ಡರ್, ರಶೀದ್ ಖಾನ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಕುಲ್ವಂತ್ ಖೆಜ್ರೋಲಿಯಾ, ಪ್ರಸಿದ್ಧ್ ಕೃಷ್ಣ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ವೆಂಕಟೇಶ್ ಅಯ್ಯರ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಕೃನಾಲ್ ಪಾಂಡ್ಯ, ಜಿತೇಶ್ ಶರ್ಮಾ (ವಿಕೀ), ಟಿಮ್ ಡೇವಿಡ್, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ರಸಿಕ್ ಸಲಾಂ, ಜೇಕಬ್ ಡಫಿ



