September 21, 2026
Monday, September 21, 2026
spot_img

ಬೆಲ್ಜಿಯಂನಲ್ಲಿ ಶಾಲಾ ಬಸ್‌ಗೆ ರೈಲು ಡಿಕ್ಕಿ: ಇಬ್ಬರು ಮಕ್ಕಳು ಸೇರಿ ನಾಲ್ವರ ದುರ್ಮ*ರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಾಲೆಗೆ ಹೊರಟಿದ್ದ ಪುಟಾಣಿ ಮಕ್ಕಳ ಪ್ರಯಾಣ ಕೆಲವೇ ಕ್ಷಣಗಳಲ್ಲಿ ಭೀಕರ ದುರಂತವಾಗಿ ಮಾರ್ಪಟ್ಟಿದೆ. ಬೆಲ್ಜಿಯಂನ ಉತ್ತರ ಭಾಗದಲ್ಲಿ ಶಾಲಾ ಮಕ್ಕಳಿದ್ದ ಮಿನಿಬಸ್‌ಗೆ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಮಿನಿಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಹಳಿ ದಾಟುವ ವೇಳೆ ಭೀಕರ ಅವಘಡ

ಬುಗ್ಗೆನ್‌ಹೌಟ್ ಪ್ರದೇಶದ ರೈಲ್ವೆ ಕ್ರಾಸಿಂಗ್ ಬಳಿ ಈ ಅಪಘಾತ ಸಂಭವಿಸಿದೆ. ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಮಿನಿಬಸ್ ರೈಲು ಹಳಿಯನ್ನು ದಾಟುವಾಗ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ:

ಮಕ್ಕಳು ಸೇರಿ ನಾಲ್ವರು ಸಾವು

ಮಿನಿಬಸ್‌ನಲ್ಲಿ ಏಳು ಮಕ್ಕಳು, ಚಾಲಕ ಹಾಗೂ ಮೇಲ್ವಿಚಾರಕಿ ಇದ್ದರು. ಅಪಘಾತದಲ್ಲಿ ಇಬ್ಬರು ಮಕ್ಕಳು, ಚಾಲಕ ಮತ್ತು ಮೇಲ್ವಿಚಾರಕಿ ಮೃತಪಟ್ಟಿದ್ದಾರೆ. ಇನ್ನಿಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ.

ಸಂಪೂರ್ಣ ಜಖಂಗೊಂಡ ಬಸ್

ಡಿಕ್ಕಿಯ ತೀವ್ರತೆಗೆ ಮಿನಿಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಧಾವಿಸಿದ ತುರ್ತು ಸೇವಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !