May 26, 2026
Tuesday, May 26, 2026
spot_img

ಅವಹೇಳನಕಾರಿ ಹೇಳಿಕೆ: ಮಹೇಶ್​ ಶೆಟ್ಟಿ ತಿಮರೋಡಿಗೆ ನಿರೀಕ್ಷಣಾ ಜಾಮೀನು ಮಂಜೂರು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಂಗಭೂಮಿ ಕಲಾವಿದ ಸುಂದರ ರೈ ಮತ್ತು ಯಕ್ಷಗಾನ ಕಲಾವಿದ ದಿನೇಶ್ ಕೋಡಪದುವು ಅವರ ತಾಯಿಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮ್ಮರೋಡಿ ಅವರಿಗೆ ಹೈಕೋರ್ಟ್ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಮಹೇಶ್ ಶೆಟ್ಟಿ ತಿಮ್ಮರೋಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು, ಪ್ರತಿವಾರ ಪುತ್ತೂರು ಪೊಲೀಸ್ ಠಾಣೆಗೆ ಹಾಜರಾಗಿ ಸಹಿ ಹಾಕಬೇಕೆಂಬ ಷರತ್ತಿನೊಂದಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ.

ಪ್ರಕರಣದ ಹಿನ್ನೆಲೆ

ಕಾರ್ಯಕ್ರಮಯೊಂದರಲ್ಲಿ ಹೆಸರೆತ್ತದೆ ವಿಡಂಬನೆ ಮಾಡಿದ್ದನ್ನು ಮಹೇಶ್ ಶೆಟ್ಟಿ ತಿಮರೋಡಿ, ಕಲಾವಿದ ಪ್ರಜ್ವಲ್ ಗುರುವಾಯನಕೆರೆ ಅವರಿಗೆ ಫೋನ್ ಮಾಡಿ ಪ್ರಶ್ನಿಸಿದ್ದಲ್ಲದೆ, ಸುಂದರ ರೈ ಮತ್ತು ದಿನೇಶ್ ಕೋಡಪದವು ಅವರನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದರು. ಈ ಬೆಳವಣಿಗೆ ತನ್ನ ಘನತೆಗೆ ಚ್ಯುತಿ ಉಂಟು ಮಾಡಿದ್ದಾರೆ. ಹೀಗಾಗಿ, ತಿಮರೋಡಿಯ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಕೋರಿ ಸುಂದರ ರೈ ಮಂದಾರ ಮತ್ತು ದಿನೇಶ್ ಶೆಟ್ಟಿಗಾರ್ ಕೋಡಪದವು ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮಹೇಶ್‌ ತಿಮರೋಡಿ ಹೈಕೋರ್ಟ್​ ಮೆಟ್ಟಿಲೇರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !