ಹೊಸದಿಗಂತ ವರದಿ ಚಿತ್ರದುರ್ಗ:
ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ನವದೆಹಲಿಯಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿದ ಸಂಸದ ಗೋವಿಂದ ಕಾರಜೋಳ, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ಮಹತ್ವದ ವಿಷಯಗಳ ಕುರಿತು ವಿಸ್ತೃತ ಹಾಗೂ ಫಲಪ್ರದ ಚರ್ಚೆ ನಡೆಸಿದರು.
ಕ್ಷೇತ್ರದಲ್ಲಿ ಕೈಗಾರಿಕಾ ಅಭಿವೃದ್ಧಿ, ಮೂಲಸೌಕರ್ಯ ವಿಸ್ತರಣೆ, ರಸ್ತೆ ಸಂಪರ್ಕ, ಉದ್ಯೋಗ ಸೃಷ್ಟಿ ಹಾಗೂ ಸಾರ್ವಜನಿಕ ಉಪಯೋಗದ ಯೋಜನೆಗಳನ್ನು ಇನ್ನಷ್ಟು ವೇಗವಾಗಿ ಜಾರಿಗೊಳಿಸುವ ಕುರಿತು ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಜೊತೆ ಚರ್ಚಿಸಲಾಯಿತು.
ಇದನ್ನೂ ಓದಿ:
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಾಮಗಾರಿಗಳು ಹಾಗೂ ಮೂಲಸೌಕರ್ಯ ಯೋಜನೆಗಳಿಗೆ ಸದಾ ಪ್ರೋತ್ಸಾಹ ಮತ್ತು ಅಗತ್ಯ ಸಹಕಾರ ನೀಡಲಾಗುವುದೆಂದು ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸಕಾರಾತ್ಮಕವಾಗಿ ಭರವಸೆ ನೀಡಿದರು.



