ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಬದಲಾವಣೆ ಚರ್ಚೆ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ನಡುವೆಯೇ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಪ್ರತಿಕ್ರಿಯೆ ನೀಡಿದ್ದಾರೆ.
ಸಿದ್ದರಾಮಯ್ಯ ರಾಜೀನಾಮೆ ಕುರಿತ ಪ್ರಶ್ನೆಗಳಿಗೆ ನೇರ ಉತ್ತರ ನೀಡದೇ, “ಅವರಿಗೆ ತಮ್ಮದೇ ಆದ ವರ್ಚಸ್ಸು ಇದೆ” ಎಂದು ಹೇಳುವ ಮೂಲಕ ಕುತೂಹಲ ಮತ್ತಷ್ಟು ಹೆಚ್ಚಿಸಿದ್ದಾರೆ.
ದೆಹಲಿಯಲ್ಲಿ ನಡೆದ ಹೈವೋಲ್ಟೇಜ್ ಸಭೆ
ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್ ಭಾಗವಹಿಸಿದ್ದ ಸಭೆಯಲ್ಲಿ ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗಳ ಬಗ್ಗೆ ಮಾತ್ರ ಚರ್ಚೆ ನಡೆದಿದೆ ಎಂದು ಸ್ಪಷ್ಟಪಡಿಸಿದರು. ಪವರ್ ಶೇರಿಂಗ್ ಅಥವಾ ಸಿಎಂ ಬದಲಾವಣೆ ಬಗ್ಗೆ ಯಾವುದೇ ಅಂತಿಮ ನಿರ್ಧಾರ ಆಗಿಲ್ಲ ಎಂದರು.
ಇದನ್ನೂ ಓದಿ:
ಡಿಕೆಶಿ-ಸಿದ್ದರಾಮಯ್ಯ ಬಗ್ಗೆ ಮೆಚ್ಚುಗೆ
ಸಿದ್ದರಾಮಯ್ಯ ಅನುಭವಸಂಪನ್ನ ನಾಯಕರು. ಡಿ.ಕೆ. ಶಿವಕುಮಾರ್ ಸಂಘಟನೆಯಿಂದ ಬೆಳೆದವರು ಎಂದು ಹೇಳಿದ ಸುರ್ಜೇವಾಲ, ಕಾಂಗ್ರೆಸ್ ಯಾವುದೇ ವ್ಯಕ್ತಿಗಿಂತ ಜನಹಿತದ ಆಧಾರದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು. ಪಕ್ಷದೊಳಗಿನ ಎಲ್ಲ ಚರ್ಚೆಗಳು ಇನ್ನೂ ಮುಂದುವರಿದಿವೆ ಎಂದರು.
ಬಿಜೆಪಿ ವಿರುದ್ಧ ವಾಗ್ದಾಳಿ
ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ವಿರೋಧಿಸುತ್ತಿದೆ ಎಂದು ಆರೋಪಿಸಿದ ಸುರ್ಜೇವಾಲ, ಶಕ್ತಿ, ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಗಳ ಬಗ್ಗೆ ಬಿಜೆಪಿ ಟೀಕೆ ಮಾಡುತ್ತಿದೆ ಎಂದು ಕಿಡಿಕಾರಿದರು. ಕೇಂದ್ರ ಸರ್ಕಾರ ಇಂಧನ ಬೆಲೆ ಏರಿಕೆ ಮೂಲಕ ಜನರಿಗೆ ಹೊರೆ ಹಾಕುತ್ತಿದೆ ಎಂದು ಆರೋಪಿಸಿದರು.



