September 21, 2026
Monday, September 21, 2026
spot_img

ಬ್ಯಾಗ್ ಪ್ಯಾಕ್ ಮಾಡ್ಕೊಂಡು ರೆಡಿ ಆಗಿ ಮಕ್ಕಳೆ…. ಜೂನ್ 1ರಿಂದ ಸ್ಕೂಲ್ ಸ್ಟಾರ್ಟ್: ಮಧು ಬಂಗಾರಪ್ಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಶಾಲೆಗಳು ಹೊಸ ಶೈಕ್ಷಣಿಕ ವರ್ಷದ ಆರಂಭಕ್ಕೆ ಸಜ್ಜಾಗಿದ್ದು, ಜೂನ್ 1ರಂದು ನಿಗದಿತ ವೇಳಾಪಟ್ಟಿಯಂತೆ ಎಲ್ಲಾ ಶಾಲೆಗಳು ಪುನಃ ಆರಂಭವಾಗಲಿವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಶಾಲೆಗಳ ಸಿದ್ಧತೆ ಪೂರ್ಣ

ರಾಜ್ಯದ ಸಾವಿರಾರು ಶಾಲೆಗಳು ಹಾಗೂ ಎಸ್‌ಡಿಎಂಸಿ ಸಮಿತಿಗಳೊಂದಿಗೆ ನಡೆಸಿದ ಸಭೆಗಳ ಮೂಲಕ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ. ಶಾಲೆಗಳು ಹೊಸ ಶೈಕ್ಷಣಿಕ ವರ್ಷಕ್ಕೆ ಸಜ್ಜಾಗಿರುವುದನ್ನು ಖಚಿತಪಡಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ:

ಪಠ್ಯಪುಸ್ತಕ ವಿತರಣೆಯಲ್ಲಿ ವೇಗ

ಪಠ್ಯಪುಸ್ತಕಗಳು, ನೋಟ್‌ಬುಕ್‌ಗಳು ಹಾಗೂ ಅಗತ್ಯ ಕಲಿಕಾ ಸಾಮಗ್ರಿಗಳನ್ನು ಬಹುತೇಕ ಎಲ್ಲಾ ಶಾಲೆಗಳಿಗೆ ವಿತರಿಸಲಾಗಿದೆ. ಶೇ.95 ರಿಂದ 96ರಷ್ಟು ವಸ್ತುಗಳು ಈಗಾಗಲೇ ಶಾಲೆಗಳಿಗೆ ತಲುಪಿವೆ ಎಂದು ಇಲಾಖೆ ಮಾಹಿತಿ ನೀಡಿದೆ.

ಸಮುದಾಯ ಭಾಗವಹಿಸಲು ಮನವಿ

ಶಾಲಾ ಆರಂಭದ ಸಂದರ್ಭದಲ್ಲಿ ನಡೆಯುವ ಸ್ವಾಗತ ಕಾರ್ಯಕ್ರಮಗಳಲ್ಲಿ ಪೋಷಕರು ಹಾಗೂ ಸ್ಥಳೀಯ ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !