July 17, 2026
Friday, July 17, 2026
spot_img

ದಿಲ್ಲಿಗೆ ಹೊರಟ್ಟಿದ್ದ ಸಿಎಂ ಸಿದ್ದರಾಮಯ್ಯ ವಿಮಾನ ಜೈಪುರದಲ್ಲಿ ತುರ್ತು ಲ್ಯಾಂಡಿಂಗ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಿಂದ ದಿಲ್ಲಿಗೆ ಪ್ರಯಾಣ ಬೆಳಸಿದ್ದ ಸಿಎಂ ಸಿದ್ದರಾಮಯ್ಯ ಅವರ ವಿಶೇಷ ವಿಮಾನವು ದಿಢೀರನೆ ಉಂಟಾದ ಹವಾಮಾನ ವೈಪರೀತ್ಯದಿಂದಾಗಿ ದಿಲ್ಲಿ ಬದಲಿಗೆ ರಾಜಸ್ಥಾನದ ಜೈಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಆಗಿದೆ.

ದಿಲ್ಲಿ ಸುತ್ತಮುತ್ತ ಭಾರೀ ಗಾಳಿ ಮಳೆ

ದಿಲ್ಲಿ ಸುತ್ತಮುತ್ತ ಭಾರೀ ಗಾಳಿ ಮತ್ತು ಮಳೆಯಿಂದಾಗಿ ವಿಮಾನಗಳ ಸಂಚಾರಕ್ಕೆ ಅಡ್ಡಿಯಾಗಿದ್ದು, ಈ ಹಿನ್ನೆಲೆ ಎಟಿಎಸ್‌ ಸೂಚನೆಯ ಮೇರೆಗೆ ಸಿಎಂ ಇದ್ದ ವಿಮಾನದ ಮಾರ್ಗವನ್ನು ಜೈಪುರದತ್ತ ಬದಲಾಯಿಸಿ ಅಲ್ಲಿ ಇಳಿದಿದೆ.

ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಕರ್ನಾಟಕ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಶಾಸಕರಾದ ಎ.ಎಸ್. ಪೊನ್ನಣ್ಣ, ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಅಭಿಷೇಕ್ ದತ್ ವಿಮಾನದಲ್ಲಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !