ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕುಸ್ತಿಪಟು ವಿನೇಶ್ ಫೋಗಟ್ಗೆ 2026ರ ಏಷ್ಯನ್ ಕ್ರೀಡಾಕೂಟದ ಆಯ್ಕೆ ಟ್ರಯಲ್ಸ್‌ನಲ್ಲಿ ಭಾಗವಹಿಸಲು ಸುಪ್ರೀಂಕೊರ್ಟ್ ಅವಕಾಶ ನೀಡಿದೆ.
ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂಕೊರ್ಟ್
ಫೋಗಟ್ಗೆ ಟ್ರಯಲ್ಸ್‌ನಲ್ಲಿ ಭಾಗವಹಿಸಲು ಅನುಮತಿ ನೀಡಿದ ದೆಹಲಿ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಭಾರತೀಯ ಕುಸ್ತಿ ಒಕ್ಕೂಟ ಸುಪ್ರೀಂ ಮೆಟ್ಟಿಲೇರಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಆರಾಧೆ ಅವರ ಪೀಠವು, ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿಯುವ ಮೂಲಕ ಹಸ್ತಕ್ಷೇಪ ಮಾಡಲು ನಿರಾಕರಿಸಿತು.
ದೇಶಕ್ಕೆ ಕೀರ್ತಿ ತಂದ ಫೋಗಟ್
ಒಂದು ವೇಳೆ ಆ ಜಾಗದಲ್ಲಿ ಬೇರೆ ಯಾರಾದರೂ ಆಗಿದ್ದರೆ, ಬೇರೆ ಸಂಗತಿ ನಡೆಯುತ್ತಿತ್ತು. ಆದರೆ ವಿನೇಶ್ ಫೋಗಟ್ ಕುಸ್ತಿಯಲ್ಲಿ ಸಾಧನೆ ಮಾಡುವ ಮೂಲಕ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೀಗಾಗಿ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿದೆ.
ಇದೇ ವೇಳೆ ತಾಯ್ತನ ಮತ್ತು ಲಿಂಗ ತಾರತಮ್ಯ ವಿಚಾರದಲ್ಲಿ ಹೈಕೋರ್ಟ್ ಮಾಡಿದ ಕೆಲವು ಅವಲೋಕನಗಳಿಗೆ ಸುಪ್ರೀಂ ಆಕ್ಷೇಪಣೆಯನ್ನು ವ್ಯಕ್ತಪಡಿಸಿದ್ದು, ಈ ವಿಚಾರದಲ್ಲಿ
ಕ್ರೀಡಾ ಆಡಳಿತದಲ್ಲಿ ನ್ಯಾಯಾಂಗ ಹಸ್ತಕ್ಷೇಪ ಆಧಾರವಾಗುವುದಿಲ್ಲ. ಕ್ರೀಡಾಪಟುಗಳು ಎಲ್ಲಾ ಅರ್ಹತೆ ಮತ್ತು ಅನುಸರಣೆ ಅವಶ್ಯಕತೆಗಳನ್ನು ಪೂರೈಸಬೇಕು ಎಂದು ತಿಳಿಸಿದೆ.



