May 29, 2026
Friday, May 29, 2026
spot_img

SHOCKING | ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು: ಆಸ್ತಿ ವಿವಾದಕ್ಕೆ ಆರು ಜನರ ಬರ್ಬರ ಹತ್ಯೆ

ಹೊಸ ದಿಗಂತ ವರದಿ,ವಿಜಯಪುರ:

ಕೆಲ ದಿನಗಳಿಂದ ಶಾಂತವಾಗಿದ್ದ ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ ಹರಿದಿದ್ದು, 6 ಜನರ ಮೇಲೆ ಗುಂಡು ಹಾರಿಸಿ, ಬಳಿಕ ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದಿದೆ.

ಇಲ್ಲಿನ ಚಂದು ನಿರಾಳೆ, ದುಂಡಪ್ಪ ನಿರಾಳೆ, ಶಿವಪುತ್ರ ನಿರಾಳೆ, ರಾಹುಲ್ ನಿರಾಳೆ, ಸಮರ್ಥ ನಿರಾಳೆ ಹಾಗೂ ಶಬ್ಬೀರ್ ನದಾಫ್ ಮೃತಪಟ್ಟವರು.

ನಿರಾಳೆ ಹಾಗೂ ಗೊಳಗಿ ಕುಟುಂಬಗಳ ಮಧ್ಯೆದ ಜಮೀನು ವ್ಯಾಜ್ಯದ ಹಿನ್ನೆಲೆ ಈ ಭೀಕರ ಘಟನೆ ಬಡೆದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !