May 29, 2026
Friday, May 29, 2026
spot_img

ತಣ್ಣೀರುಬಾವಿ ಇಕೋ ಬೀಚ್‌ನಲ್ಲಿ ಸರ್ಫಿಂಗ್‌ ಮೇನಿಯಾ: ಅಲೆಗಳ ನಡುವೆ ಸರ್ಫರ್‌ಗಳ ಸಾಹಸ!

ಹೊಸ ದಿಗಂತ ವರದಿ, ಮಂಗಳೂರು:

ಮಂಗಳೂರಿನ ತಣ್ಣೀರುಬಾವಿಯ ಬ್ಲೂ ಬೇ ಇಕೋ ಬೀಚ್‌ನಲ್ಲಿ ಮೇ ೩೧ರವರೆಗೆ ಆಯೋಜನೆಯಾಗಿರುವ ಇಂಡಿಯನ್ ಓಪನ್ ಆಫ್ ಸರ್ಫಿಂಗ್ ಚಾಂಪಿಯನ್ ಶಿಪ್ ಗೆ ಶುಕ್ರವಾರ ಅದ್ದೂರಿ ಚಾಲನೆ ದೊರಕಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಮೂರು ದಿನಗಳ ಈ ಚಾಂಪಿಯನ್‌ಶಿಪ್‌ಗೆ ಚಾಲನೆ ನೀಡಿ ಮಾತನಾಡಿ, ಮಂಗಳೂರಿನಲ್ಲಿ ಇಂತಹದ್ದೊಂದು ಮಹತ್ವದ ಸ್ಪರ್ಧೆ ಆಯೋಜನೆಯಾಗಿರುವುದರಿಂದ ಈಭಾಗದ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿದಂತಾಗಿದೆ. ದೇಶದ ವಿವಿಧ ಭಾಗಗಳಿಂದ ಸ್ಪರ್ಧಿಗಳು ಭಾಗವಹಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು.

ವಿವಿಧ ರಾಜ್ಯಗಳಿಂದ ಸ್ಪರ್ಧಿಗಳು ಭಾಗಿ

ಕೇರಳ, ತಮಿಳುನಾಡು, ಗೋವಾ, ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಂದ ಸ್ಪರ್ಧಿಗಳು ಭಾಗವಹಿಸುತ್ತಿದ್ದಾರೆ. ದೇಶದಲ್ಲಿ ಸರ್ಫಿಂಗ್ ಹಾಗೂ ಸ್ಟ್ಯಾಂಡ್-ಅಪ್ ಪ್ಯಾಡ್ಲಿಂಗ್ ಕ್ರೀಡೆಗಳ ಆಡಳಿತ ಸಂಸ್ಥೆಯಾದ ಸರ್ಫಿಂಗ್ ಫೆಡರೇಶನ್ ಆಫ್ ಇಂಡಿಯಾ ಆಶ್ರಯದಲ್ಲಿ ನಡೆಯುವ ಈ ಸ್ಪರ್ಧೆಯನ್ನು ನವ ಮಂಗಳೂರು ಬಂದರು ಪ್ರಾಧಿಕಾರ ಸತತ ಮೂರನೇ ವರ್ಷವೂ ‘ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್, ಶೀರ್ಷಿಕೆ ಪ್ರಾಯೋಜಕರಾಗಿ ಬೆಂಬಲಿಸುತ್ತಿದೆ. ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಸರ್ಫಿಂಗ್ ಅಸೋಸಿಯೇಷನ್ ಸಹ ಕಾರ್ಯಕ್ರಮಕ್ಕೆ ಕೈಜೋಡಿಸಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !