ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಟೂರ್ನಿ ಕೊನೆಯ ಹಂತಕ್ಕೆ ಬಂದು ತಲುಪಿದ್ದು, ನ್ಯೂ ಚಂಡೀಗಢ ನಲ್ಲಿ ಇಂದಿನ ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಗುಜರಾತ್ ಟೈಟನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿದೆ.
ರಾಜಸ್ಥಾನ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ
ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಕಳೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿ ಬೃಹತ್ ಜಯ ಸಾಧಿಸಿದ್ದ ರಾಜಸ್ತಾನ ಇಂದು ಅದೇ ಹುಮ್ಮಸ್ಸಿನಲ್ಲಿ ಆಡಲು ಸಜ್ಜಾಗಿದ್ದಾರೆ.
ಗೆದ್ದ ತಂಡ ಫೈನಲ್ ಗೆ ಲಗ್ಗೆ
ರಾಜಸ್ಥಾನ ತಂಡವು ಎಲಿಮಿನೇಟರ್‌ನಲ್ಲಿ ಹೈದರಾಬಾದ್‌ನಂತಹ ಬಲಿಷ್ಠ ತಂಡವನ್ನು 92 ರನ್ಗಳಿಂದ ಸೋಲಿಸಲು ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಎಂಟ್ರಿ ಕೊಟ್ಟರೆ, ಅತ್ತ ಗುಜರಾತ್ ಟೈಟಾನ್ಸ್ ತಂಡವು ಮೊದಲ ಕ್ವಾಲಿಫೈಯರ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಹೀನಾಯ ಸೋಲು ಅನುಭವಿಸಿ ಬಂದಿದೆ. ಹೀಗಾಗಿ ಈ ಪಂದ್ಯ ಹೆಚ್ಚು ಮಹತ್ವ ಪಡೆದಿದ್ದು, ಗೆದ್ದ ತಂಡ ಫೈನಲ್ ಗೆ ಪ್ರವೇಶಿಸಲಿದೆ.
ರಾಜಸ್ಥಾನ್ ರಾಯಲ್ಸ್ : ವೈಭವ್ ಸೂರ್ಯವಂಶಿ, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿಕೀ), ರಿಯಾನ್ ಪರಾಗ್ (ನಾಯಕ), ಡೊನೊವನ್ ಫೆರೇರಾ, ದಾಸುನ್ ಶನಕ, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಾಂದ್ರೆ ಬರ್ಗರ್, ಬ್ರಿಜೇಶ್ ಶರ್ಮಾ, ಯಶ್ ಪುಂಜಾ
ಗುಜರಾತ್ ಟೈಟಾನ್ಸ್: ಶುಭಮನ್ ಗಿಲ್ (ನಾಯಕ), ಬಿ ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೀ), ವಾಷಿಂಗ್ಟನ್ ಸುಂದರ್, ನಿಶಾಂತ್ ಸಿಂಧು, ಜೇಸನ್ ಹೋಲ್ಡರ್, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಕಗಿಸೊ ರಬಾಡ, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್



