May 31, 2026
Sunday, May 31, 2026
spot_img

ಕೆಪಿಸಿಸಿ ಮುಂದಿನ ಸಾರಥಿ ಯಾರು? ಮಲ್ಲಿಕಾರ್ಜುನ ಖರ್ಗೆ ಕೊಟ್ಟ ಬಿಗ್ ಹಿಂಟ್ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದ ರಾಜಕೀಯ ವಲಯದಲ್ಲಿ ಈಗ ಹೊಸ ಕೆಪಿಸಿಸಿ ಅಧ್ಯಕ್ಷರ ಆಯ್ಕೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ಆರಂಭವಾಗಿವೆ. ಪ್ರಸ್ತುತ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗುತ್ತಿದ್ದಂತೆ, ತೆರವಾಗಲಿರುವ ಪಕ್ಷದ ಸಾರಥಿ ಸ್ಥಾನಕ್ಕಾಗಿ ರಾಜ್ಯ ಕಾಂಗ್ರೆಸ್‌ನಲ್ಲಿ ಭಾರಿ ಪೈಪೋಟಿ ಶುರುವಾಗಿದೆ.

ಈ ಮಹತ್ವದ ಬೆಳವಣಿಗೆಯ ಬಗ್ಗೆ ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾಧ್ಯಮಗಳಿಗೆ ಪ್ರಮುಖ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ.

ಸಹಜವಾಗಿಯೇ ಬದಲಾಗಲಿದೆ ಕೆಪಿಸಿಸಿ ಅಧ್ಯಕ್ಷ ಸ್ಥಾನ:

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಜವಾಬ್ದಾರಿ ವಹಿಸಿಕೊಂಡ ಬಳಿಕ, ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಬದಲಾವಣೆಯಾಗುವುದು ಸಹಜ ಪ್ರಕ್ರಿಯೆ ಎಂದು ಖರ್ಗೆ ಸ್ಪಷ್ಟಪಡಿಸಿದ್ದಾರೆ. “ಜನಬೆಂಬಲ ಹೊಂದಿರುವ ಮತ್ತು ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯುವ ಸೂಕ್ತ ವ್ಯಕ್ತಿಗೆ ಈ ಜವಾಬ್ದಾರಿ ನೀಡಲಾಗುತ್ತದೆ. ಮುಖ್ಯಮಂತ್ರಿಯವರ ಜೊತೆಗೆ ಉತ್ತಮ ಸಮನ್ವಯ ಸಾಧಿಸಿಕೊಂಡು ಹೋಗುವ ನಾಯಕನನ್ನು ನಾವು ಆಯ್ಕೆ ಮಾಡುತ್ತೇವೆ” ಎಂದು ಅವರು ಹೇಳಿದರು.

2028ರ ವಿಧಾನಸಭಾ ಚುನಾವಣೆಯೇ ಟಾರ್ಗೆಟ್:

ಮುಂದಿನ ವಿಧಾನಸಭಾ ಚುನಾವಣೆಗೆ ಕೇವಲ 24 ತಿಂಗಳುಗಳು ಮಾತ್ರ ಬಾಕಿ ಉಳಿದಿವೆ. ಈ ಹಿನ್ನೆಲೆಯಲ್ಲಿ ಪಕ್ಷವನ್ನು ಸಂಘಟಿಸುವ ಮತ್ತು ಮುಂಬರುವ ಎಲೆಕ್ಷನ್ ಎದುರಿಸುವ ನಿಟ್ಟಿನಲ್ಲಿ ಹೈಕಮಾಂಡ್ ಗಂಭೀರ ಚಿಂತನೆ ನಡೆಸಿದೆ.

“ನಮಗೆ ಈಗ ಅತ್ಯಂತ ವೇಗವಾಗಿ ಕೆಲಸ ಮಾಡುವ ಮತ್ತು ಎಲ್ಲರನ್ನೂ ಒಗ್ಗಟ್ಟಿನಿಂದ ಕಲೆಕ್ಟಿವ್ ಆಗಿ ಮುನ್ನಡೆಸುವ ನಾಯಕನ ಅಗತ್ಯವಿದೆ. ಹೊಸ ಅಧ್ಯಕ್ಷರಿಗೆ ಪಕ್ಷದ ಒಳಗೆ ಎಲ್ಲರ ಸಹಕಾರವೂ ಸಿಗಬೇಕಾಗುತ್ತದೆ. ಈ ಎಲ್ಲಾ ಅಂಶಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ ಶೀಘ್ರದಲ್ಲೇ ಹೊಸ ಕೆಪಿಸಿಸಿ ಅಧ್ಯಕ್ಷರ ಹೆಸರನ್ನು ಅಂತಿಮಗೊಳಿಸಲಾಗುವುದು,” ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !