June 1, 2026
Monday, June 1, 2026
spot_img

ಭಾರತದತ್ತ ಮುಖ ಮಾಡಿದ ‘ಆನ್ಲೈನ್ ಜಿರಳೆ ಪಾರ್ಟಿ’ ಸಂಸ್ಥಾಪಕ: ಜೂನ್ 6ಕ್ಕೆ ‘ದೆಹಲಿ ಚಲೋ’ಗೆ ಕರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇತ್ತೀಚೆಗೆ ಸ್ಥಾಪನೆಯಾದ ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಜೂನ್ 6ರಂದು ಭಾರತಕ್ಕೆ ಮರಳಲಿದ್ದು, ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ವಿರುದ್ಧ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯಲ್ಲಿನ ಲೋಪಗಳು ಮತ್ತು ವಿದ್ಯಾರ್ಥಿಗಳ ಅಸಮಾಧಾನವನ್ನು ಮುಂದಿಟ್ಟುಕೊಂಡು ಅವರು ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದಾರೆ.

ಬೆಂಬಲಿಗರಿಗೆ ಬಹಿರಂಗ ಆಹ್ವಾನ

ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ವಿಡಿಯೋ ಸಂದೇಶದಲ್ಲಿ ದೀಪ್ಕೆ, ವಿದ್ಯಾರ್ಥಿಗಳು ಹಾಗೂ ಬೆಂಬಲಿಗರು ತಮ್ಮ ಹೋರಾಟಕ್ಕೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ. ಜೂನ್ 6ರಂದು ದೆಹಲಿಗೆ ಆಗಮಿಸುವ ವೇಳೆ ವಿಮಾನ ನಿಲ್ದಾಣದಲ್ಲೇ ತಮ್ಮನ್ನು ಭೇಟಿ ಮಾಡಿ, ಅಲ್ಲಿಂದ ಒಟ್ಟಾಗಿ ಪ್ರತಿಭಟನೆಗೆ ಮುಂದಾಗುವಂತೆ ಕರೆ ನೀಡಿದ್ದಾರೆ.

ಇದನ್ನೂ ಓದಿ:

‘ಸಾಂವಿಧಾನಿಕ ಹೋರಾಟ’ದ ಮಾತು

ಭಾರತದ ಸಂವಿಧಾನ ನೀಡಿರುವ ಹಕ್ಕುಗಳ ವ್ಯಾಪ್ತಿಯಲ್ಲಿಯೇ ತಮ್ಮ ಹೋರಾಟ ನಡೆಯಲಿದೆ ಎಂದು ದೀಪ್ಕೆ ಹೇಳಿದ್ದಾರೆ. ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ತೆರಳಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಕೋರಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪರೀಕ್ಷಾ ವಿವಾದಗಳೇ ಕಾರಣ?

ಇತ್ತೀಚಿನ ಪರೀಕ್ಷಾ ಪ್ರಕ್ರಿಯೆಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಗೊಂದಲ ಮತ್ತು ಅಸಮಾಧಾನವೇ ಈ ಪ್ರತಿಭಟನೆಯ ಪ್ರಮುಖ ಕಾರಣ ಎಂದು ದೀಪ್ಕೆ ಆರೋಪಿಸಿದ್ದಾರೆ. ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಹೆಚ್ಚಿಸಬೇಕೆಂದು ಒತ್ತಾಯಿಸಿರುವ ಅವರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂಬ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !