July 17, 2026
Friday, July 17, 2026
spot_img

WEATHER | ಇಡೀ ರಾಜ್ಯದಲ್ಲಿ ಭಾರೀ ಮಳೆ, ಎಂಟು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಇಂದು ಭಾರೀ ಮಳೆಯ ಅಬ್ಬರ ಇರಲಿದ್ದು, ಸಂಜೆ ವೇಳೆಗೆ ಎಲ್ಲರೂ ಮನೆಗೆ ಸೇರುವುದು ಉತ್ತಮವಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಹಾವೇರಿ, ಗದಗ, ಧಾರವಾಡ ಹಾಗೂ ಕೊಪ್ಪಳ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆ, ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಕೂಡ ಮಳೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !