ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ನಡೆಯುವ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಕಾರ್ಯಕ್ರಮಕ್ಕೂ ಮುನ್ನ ಡಿಕೆಶಿ ತಮ್ಮ ಕನಕಪುರದ ಮನೆದೇವರಿಗೆ ಪೂಜೆ ಸಲ್ಲಿಸಲಿದ್ದಾರೆ.
ಕನಕಪುರ ತಾಲೂಕಿನ ಕೋಡಿಹಳ್ಳಿಗೆ ಡಿಕೆಶಿ ಇಂದು ಭೇಟಿ ನೀಡಲಿದ್ದು, ಮನೆಯ ದೇವತೆಗಳ ದರುಶನ ಪಡೆಯಲಿದ್ದಾರೆ. ಇನ್ನೇನು ಕೆಲವೇ ಸಮಯದಲ್ಲಿ ಬೆಂಗಳೂರು ತಲುಪಲಿದ್ದಾರೆ. ಕನಕಪುರದ ನಿವಾಸದಲ್ಲಿ ತಾಯಿಯ ಆಶೀರ್ವಾದ ಪಡೆದು, ಕುಟುಂಬಸಮೇತರಾಗಿ ಮನೆಯ ದೇವರಿಗೆ ಪೂಜೆ ಸಲ್ಲಿಸಲಿದ್ದಾರೆ.
ನಂತರ ಕನಕಪುರದ ಮನೆದೇವತೆ ಕೆಂಕ್ಕೆರಮ್ಮ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದು, ಬಳಿಕ ಶಕ್ತಿ ದೇವತೆ ಕಬ್ಬಾಳಿನ ಕಬ್ಬಾಳಮ್ಮ ದೇವಿಯ ದರ್ಶನ ಪಡೆದು, ಆಶೀರ್ವಾದ ಪಡೆಯಲಿದ್ದಾರೆ. ಧಾರ್ಮಿಕ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿದ ಬಳಿಕ ಸಂಜೆ ಬೆಂಗಳೂರಿಗೆ ಮರಳಲಿದ್ದು, ನಂತರ ಸಂಜೆ ಬುಧವಾರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಇದೆ.



