June 2, 2026
Tuesday, June 2, 2026
spot_img

ಪತಿ-ಪುತ್ರನಿಂದ ಸನಾತನ ಧರ್ಮ ನಾಶದ ಹೇಳಿಕೆ: ಚಾಮುಂಡಿ ಬೆಟ್ಟದಲ್ಲಿ ದುರ್ಗಾ ಸ್ಟಾಲಿನ್‌ ವಿಶೇಷ ಪೂಜೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ತಮಿಳುನಾಡಿನ ಮಾಜಿ ಸಿಎಂ ಎಂ.ಕೆ. ಸ್ಟಾಲಿನ್‌ ಹಾಗೂ ಪುತ್ರ ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎನ್ನುವ ಹೇಳಿಕೆ ಕೊಟ್ಟ ಕೆಲವೇ ದಿನಗಳಲ್ಲಿ ದುರ್ಗಾ ಸ್ಟಾಲಿನ್‌ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.

ಕರ್ನಾಟಕದ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾದ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿರುವ ದುರ್ಗಾ ಸ್ಟಾಲಿನ್‌ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದುರ್ಗಾ ದೇವಿಯ ಭಕ್ತೆಯಾದ ಸ್ಟಾಲಿನ್‌ ಪತ್ನಿ ಶ್ರೀರಂಗಪಟ್ಟಣದ ನಿಮಿಷಾಂಬಾ ದೇವಾಲಯಕ್ಕೂ ಭೇಟಿ ನೀಡಿದ್ದಾರೆ.

ಉಡಿಸೇವೆ, ಬಳೆಸೇವೆ ಇನ್ನಿತರ ವಿಶೇಷ ಪೂಜೆಗಳನ್ನು ಸಲ್ಲಿಸಿದ್ದಾರೆ.ಧಾರ್ಮಿಕ ಕಾರ್ಯಕ್ರಮಗಳ ಬಳಿಕ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಅವರ ನಿವಾಸಕ್ಕೆ ಅಚ್ಚರಿ ಭೇಟಿ ನೀಡಿದ ದುರ್ಗಾ ಸ್ಟಾಲಿನ್ ಅವರು ದಂಪತಿಯ ಆಶೀರ್ವಾ ಪಡೆದಿದ್ದಾರೆ. ಈ ಕುರಿತ ವಿಡಿಯೋ ಕೂಡ ವ್ಯಾಪಕ ವೈರಲ್ ಆಗುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !