June 2, 2026
Tuesday, June 2, 2026
spot_img

ಹೊಸ ಸಂಪುಟದಲ್ಲಿ ಈ ಮೂವರಿಗೆ ಸ್ಥಾನ ಬೇಕು: ರಾಜಕೀಯದಲ್ಲಿ ಹೊಸ ಬೇಡಿಕೆ

ಹೊಸದಿಗಂತ ವರದಿ ಬಳ್ಳಾರಿ:

ಮಾಜಿ ಸಚಿವರಾದ, ಹಿರಿಯರಾದ ಕೆ.ಹೆಚ್.ಮುನಿಯಪ್ಪ, ಸಂತೋಷ್ ಲಾಡ್ ಹಾಗೂ ಬಿ.ನಾಗೇಂದ್ರ ಅವರಿಗೆ ಟ್ರಬಲ್ ಶೂಟರ್, ಯುವ ನಾಯಕ, ಡಿ.ಕೆ.ಶಿವಕುಮಾರ ಅವರ ನೂತನ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಲಿಡ್ಕರ್ ಅಧ್ಯಕ್ಷ ಮುಂಡ್ರಿಗಿ ನಾಗರಾಜ್ ಅವರು ಒತ್ತಾಯಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿದ ಅವರು, ರಾಜ್ಯ ಸರ್ಕಾರದ ನೂತನ ಮುಖ್ಯಮಂತ್ರಿಗಳಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದು ಅತ್ಯಂತ ಸಂತಸ ಮೂಡಿಸಿದೆ. ಮಾಜಿ ಸಚಿವರು, ದಲಿತ ಸಮಾಜದ ಪ್ರಭಾವಿ ನಾಯಕ ಹಾಗೂ ಕರ್ನಾಟಕ ಮಾದರ ಮಹಾ ಸಭಾದ ರಾಜ್ಯಾಧ್ಯಕ್ಷ ಕೆ. ಹೆಚ್. ಮುನಿಯಪ್ಪ ಅವರಿಗೆ, ಕಾರ್ಮಿಕ ಇಲಾಖೆಯನ್ನು ಯಶಸ್ವಿಯಾಗಿ ಮುನ್ನಡೆಸಿ, ಸಾಕಷ್ಟು ಯೋಜನೆಗಳನ್ನು ರೂಪಿಸಿದ ಮಾದರಿ ಸಚಿವ ಸಂತೋಷ್ ಎಸ್ ಲಾಡ್ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ನೂತನ ಸರ್ಕಾರದ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಡಿ.ಕೆ ಶಿವಕುಮಾರ್ ಅವರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ:

ಕಾರ್ಮಿಕ ಇಲಾಖೆಯ ಸಚಿವರಾಗಿ ಕಾರ್ಯನಿರ್ವಹಿಸಿದ ವೇಳೆ ಹಲವು ಜನಪರ ಯೋಜನೆಗಳನ್ನು ರೂಪಿಸಿ ಯಶಸ್ವಿಯಾಗಿ ಜಾರಿಗೊಳಿಸಿದ್ದ ಸಂತೋಷ್ ಎಸ್. ಲಾಡ್ ಅವರಿಗೆ ಸಚಿವ ಸ್ಥಾನ ನೀಡಬೇಕು. ಮಾಜಿ ಸಚಿವ ಹಾಗೂ ಬಳ್ಳಾರಿ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡ ಬಿ. ನಾಗೇಂದ್ರ ಅವರಿಗೂ ಸಚಿವ ಸ್ಥಾನ ನೀಡುವ ಮೂಲಕ ಜಿಲ್ಲೆಗೆ ಪ್ರಾತಿನಿಧ್ಯ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

ಈ ಮೂವರು ನಾಯಕರ ಅನುಭವ ಮತ್ತು ಸೇವೆಯನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ಹಾಗೂ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಲ್ಲಿ ಮನವಿ ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !