June 3, 2026
Wednesday, June 3, 2026
spot_img

ಡಿ.ಕೆ. ಶಿವಕುಮಾರ್‌ ಎಂಬ ಹೆಸರಿನವನಾದ ನಾನು.. ರಾಜ್ಯದ 25ನೇ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಿದ್ದಾರೆ.

ತಳಮಟ್ಟದ ಹೋರಾಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿ, ಕನಕಪುರದ ಬಂಡೆ ಎಂಬ ಹೆಸರಿನಲ್ಲೇ ಜನರ ಮನಗೆದ್ದ ಡಿಕೆಶಿ ಇದೀಗ ರಾಜ್ಯದ ನೂತನ ಮುಖ್ಯಮಂತ್ರಿಯಾಗಿದ್ದಾರೆ. ಇಂದು ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಡಿಕೆಶಿ ಅವರಿಗೆ ಪ್ರಮಾಣವಚನ ಬೋಧಿಸಿದ್ದಾರೆ.

ಗಂಗಾಧರಜ್ಜನ ಹೆಸರಿನಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ರಾಜಭವನದಲ್ಲಿ ಸರಳವಾಗಿ ಕಾರ್ಯಕ್ರಮ ನಡೆದಿದ್ದು, ಸೆಲೆಬ್ರಿಟಿಗಳು ಹಾಗೂ ರಾಜಕೀಯ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಯಾರೆಲ್ಲಾ ಇದ್ದಾರೆ?
ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌
ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ
ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ
ಮಾಜಿ ಸಿಎಂ ಸಿದ್ದರಾಮಯ್ಯ
ತೆಲಂಗಾಣ ಸಿಎಂ ರೇವಂತ್​ ರೆಡ್ಡಿ
ಕೇರಳಂ ಸಿಎಂ ಸತೀಶನ್ ಇನ್ನಿತರರು ಭಾಗಿಯಾಗಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !