June 3, 2026
Wednesday, June 3, 2026
spot_img

ಡಿಕೆಶಿ ಪದಗ್ರಹಣ ಬೆನ್ನಲ್ಲೇ ಪಿಎಂ ಮೋದಿ ಶುಭ ಹಾರೈಕೆ: ರಾಜ್ಯದ ಅಭಿವೃದ್ಧಿಗೆ ಒಟ್ಟಾಗಿ ಕೆಲಸ ಮಾಡುವ ಆಶ್ವಾಸನೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದ ಡಿ. ಕೆ. ಶಿವಕುಮಾರ್‌ಗೆ ಪ್ರಧಾನಿ ನರೇಂದ್ರ ಮೋದಿ ಹೃತ್ಪೂರ್ವಕ ಅಭಿನಂದನೆ. ರಾಜ್ಯದ ಜನರ ಕಲ್ಯಾಣ ಮತ್ತು ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರದೊಂದಿಗೆ ಶ್ರಮಿಸಲಿದೆ ಎಂದು ಪ್ರಧಾನಿ ಭರವಸೆ ನೀಡಿದ್ದಾರೆ.

ಪ್ರಧಾನಿ ಮೋದಿ ಟ್ವೀಟ್:
“ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್‌ಗೆ ಅಭಿನಂದನೆಗಳು. ಅವರ ಅಧಿಕಾರಾವಧಿ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ” ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. ರಾಜ್ಯದ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕ ಕಲ್ಯಾಣ ಯೋಜನೆಗಳ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರವು ನೂತನ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸಿ ಕೆಲಸ ಮಾಡಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಗಣ್ಯರಿಂದ ಶುಭಾಶಯಗಳ ಮಹಾಪೂರ:
ಪ್ರಧಾನಿ ಅವರಲ್ಲದೆ ದೇಶದ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಕೇಂದ್ರ ಸಚಿವರು ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಕೆ. ಶಿವಕುಮಾರ್‌ಗೆ ತಮ್ಮ ಹಾರೈಕೆಗಳನ್ನು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !