September 8, 2026
Tuesday, September 8, 2026
spot_img

ಹೊಸ ಸರ್ಕಾರದ ಹೊಸ ಟೀಮ್ ಸಿದ್ಧ: ಮುಖ್ಯಮಂತ್ರಿಗಳ ಬೆನ್ನಿಗೆ ನಿಂತು ಪ್ರಮಾಣವಚನ ಸ್ವೀಕರಿಸಿದ ಶಾಸಕರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ ನಡೆದ ಸಮಾರಂಭದಲ್ಲಿ, ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಾರಥ್ಯದ ಹೊಸ ಸರ್ಕಾರ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸೇರಿದಂತೆ ಮೊದಲ ಹಂತದಲ್ಲಿ ಒಟ್ಟು 13 ಪ್ರಮುಖ ನಾಯಕರಿಗೆ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಬೋಧಿಸಿದರು.

ಡಾ. ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ:
ದೀರ್ಘಾವಧಿಯ ಚರ್ಚೆಗಳ ನಂತರ, ಹಿರಿಯ ದಲಿತ ನಾಯಕ ಡಾ. ಜಿ. ಪರಮೇಶ್ವರ್‌ನ್ನು ಏಕೈಕ ಉಪಮುಖ್ಯಮಂತ್ರಿಯಾಗಿ ನೇಮಕ ಮಾಡಲಾಗಿದ್ದು, ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಹೊಸ ಸಚಿವರ ಪದಗ್ರಹಣ:
ಮೊದಲ ಹಂತದಲ್ಲಿ ಮುಖ್ಯಮಂತ್ರಿಗಳೊಂದಿಗೆ ಕೆ. ಹೆಚ್. ಮುನಿಯಪ್ಪ, ಕೆ. ಜೆ. ಜಾರ್ಜ್, ಎಂ. ಬಿ. ಪಾಟೀಲ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು. ಟಿ. ಖಾದರ್, ಈಶ್ವರ್ ಖಂಡ್ರೆ, ಬೈರತಿ ಸುರೇಶ್ ಮತ್ತು ಡಾ. ಶರಣಪ್ರಕಾಶ್ ಪಾಟೀಲ್ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಯತೀಂದ್ರ ಸಿದ್ದರಾಮಯ್ಯ ಪದಾರ್ಪಣೆ:
ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ಸಚಿವರಾಗಿ ಮುಖ್ಯಮಂತ್ರಿಗಳ ಹೊಸ ಸಂಪುಟವನ್ನು ಸೇರಿಕೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !