October 16, 2026
Friday, October 16, 2026
spot_img

ಸಿಎಂ ಆಗಿ ಮೊದಲ ಘೋಷಣೆ ಮಾಡಿದ ಡಿಕೆಶಿ: ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಫ್ರೀ ಪಾಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಡಿ.ಕೆ ಶಿವಕುಮಾರ್‌ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ.

ರಾಜ್ಯದ ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್‌ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಎಲ್ಲಾ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ಘೋಷಣೆ ಮಾಡಲಾಗಿದೆ.

ಅಧಿಕಾರ ಸ್ವೀಕರಿಸಿದ ನಂತರ ಡಿಕೆಶಿ ವಿಧಾನಸೌಧದಲ್ಲಿ ಮೊದಲ ಸುದ್ದಿಗೋಷ್ಠಿ ನಡೆಸಿದ್ದು, ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ಅನುಕೂಲವಾಗುವಂತೆ ಉಚಿತ ಬಸ್‌ಪಾಸ್‌ ನೀಡುತ್ತಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ. ಶುಭಗಳಿಗೆ, ಶುಭ ಮಹೂರ್ತ ಬರುತ್ತದೆ ಎಂದು ಹೇಳುತ್ತಲೇ ಇದ್ದೆ. ಆ ದಿನ ಬಂದಾಗಿದೆ. ಹೊಸ ಕೆಲಸ, ಹೊಸ ಅವಕಾಶ ನನಗೆ ಸಿಕ್ಕಿದೆ. ಇದನ್ನು ಸದುಪಯೋಗ ಪಡಿಸಿಕೊಳ್ಳುತ್ತೇನೆ. ಅಭಿವೃದ್ಧಿಯ ಕೆಲಸ ಮಾಡುತ್ತೇನೆ ಎಂದಿದ್ದಾರೆ.

ರಾಜ್ಯದ ಜನ ನನ್ನ ಮೇಲೆ ಅಪಾರ ನಂಬಿಕೆ ಇಟ್ಟಿದ್ದಾರೆ. ನನ್ನ ಅನುಭವಕ್ಕೆ ತಕ್ಕಂತಹ ಕೆಲಸ ಮಾಡುತ್ತೇನೆ ಎಂದಿದ್ದಾರೆ.

Must Read