September 26, 2026
Saturday, September 26, 2026
spot_img

‘ಭಾರತಕ್ಕೆ ಆದೇಶ ಕೊಡುವ ಯುಗ ಮುಗಿದಿದೆ’ : ಟ್ರಂಪ್‌ಗೆ ಪುಟಿನ್ ತಿರುಗೇಟು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಾಗತಿಕ ರಾಜಕೀಯ ಬೆಳವಣಿಗೆಗಳ ನಡುವೆ ಭಾರತದ ಸ್ವತಂತ್ರ ವಿದೇಶಾಂಗ ನೀತಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಯಾವುದೇ ದೇಶದ ಒತ್ತಡಕ್ಕೆ ಭಾರತ ತಲೆಬಾಗುವುದಿಲ್ಲ ಮತ್ತು ತನ್ನ ರಾಷ್ಟ್ರೀಯ ಹಿತಾಸಕ್ತಿಗಳ ಆಧಾರದ ಮೇಲೆಯೇ ನಿರ್ಧಾರಗಳನ್ನು ಕೈಗೊಳ್ಳುತ್ತದೆ ಎಂದು ಟ್ರಂಪ್ ಗೆ ತಿರುಗೇಟು ನೀಡಿದ್ದಾರೆ.

ಮೋದಿ ನಾಯಕತ್ವಕ್ಕೆ ಪುಟಿನ್ ಮೆಚ್ಚುಗೆ

ಸೇಂಟ್ ಪೀಟರ್ಸ್‌ಬರ್ಗ್ ಆರ್ಥಿಕ ವೇದಿಕೆಯಲ್ಲಿ ಮಾತನಾಡಿದ ಪುಟಿನ್, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ ಎಂದು ಶ್ಲಾಘಿಸಿದರು.

ಇದನ್ನೂ ಓದಿ:

ಭಾರತವು ಪಾಲುದಾರ ರಾಷ್ಟ್ರಗಳನ್ನು ಆಯ್ಕೆ ಮಾಡುವಾಗ ಬೆಲೆ, ತಂತ್ರಜ್ಞಾನ ಮತ್ತು ರಾಷ್ಟ್ರೀಯ ಹಿತಾಸಕ್ತಿಗಳನ್ನು ಪ್ರಮುಖವಾಗಿ ಪರಿಗಣಿಸುತ್ತದೆ ಎಂದು ಪುಟಿನ್ ಅಭಿಪ್ರಾಯಪಟ್ಟರು. ಉಭಯ ದೇಶಗಳ ನಡುವಿನ ವ್ಯಾಪಾರ ವಹಿವಾಟನ್ನು 100 ಬಿಲಿಯನ್ ಡಾಲರ್ ಮಟ್ಟಕ್ಕೆ ಹೆಚ್ಚಿಸುವ ಗುರಿ ಹೊಂದಿರುವುದಾಗಿ ಅವರು ತಿಳಿಸಿದರು.

ಇಂಧನ ಭದ್ರತೆಯಲ್ಲಿ ಭಾರತ ಅಚಲ

ರಷ್ಯಾದಿಂದ ತೈಲ ಖರೀದಿ ಕುರಿತು ಉಂಟಾಗಿರುವ ಜಾಗತಿಕ ಚರ್ಚೆಗಳ ನಡುವೆಯೂ, ದೇಶದ ಇಂಧನ ಭದ್ರತೆ ಮತ್ತು ಜನರಿಗೆ ಕೈಗೆಟುಕುವ ದರದಲ್ಲಿ ಇಂಧನ ಒದಗಿಸುವುದೇ ಭಾರತದ ಆದ್ಯತೆ ಎಂದು ಭಾರತೀಯ ವಿದೇಶಾಂಗ ಇಲಾಖೆ ಪುನರುಚ್ಚರಿಸಿದೆ.

Must Read