September 26, 2026
Saturday, September 26, 2026
spot_img

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್: ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ

ಹೊಸದಿಗಂತ ವರದಿ ಶಿವಮೊಗ್ಗ:

ಶಿವಮೊಗ್ಗ-ಉಡುಪಿ ಗಡಿಯ ಹುಲಿಕಲ್ (ಬಾಳೆಬರೇ) ಘಾಟಿಯಲ್ಲಿ ಸಂಚರಿಸುತ್ತಿದ್ದ ಶ್ರೀ ದುರ್ಗಾಂಬ ಸಂಸ್ಥೆಯ ಬಸ್‌ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ಆದೃಷ್ಟವಶಾತ್, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಸುರಕ್ಷಿತವಾಗಿ ಹೊರಬಂದಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಪ್ರಕರಣ ವರದಿಯಾಗಿಲ್ಲ.

ಇದನ್ನೂ ಓದಿ:

ಪ್ರಾಥಮಿಕ ಮಾಹಿತಿಯ ಪ್ರಕಾರ, ಮೊದಲು ಬಸ್‌ನಿಂದ ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ವ್ಯಾಪಿಸಿದೆ ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ದೊರೆಯುವ ಸಾಧ್ಯತೆ ಇದೆ.

Must Read