ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಫ್ರಿಕಾದ ಕೆಲವು ರಾಷ್ಟ್ರಗಳಲ್ಲಿ ಎಬೋಲಾ ವೈರಸ್ ಕುರಿತ ಆತಂಕ ಹೆಚ್ಚುತ್ತಿರುವ ಬೆನ್ನಲ್ಲೇ ಛತ್ತೀಸ್‌ಗಢ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಬಿಗಿಗೊಳಿಸಿದೆ. ರಾಜ್ಯಕ್ಕೆ ಆಗಮಿಸಿದ ಆಫ್ರಿಕಾದ ಮೂವರು ನಾಗರಿಕರನ್ನು 21 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರಿಸಿ ಆರೋಗ್ಯ ಮೇಲ್ವಿಚಾರಣೆ ನಡೆಸಲಾಗುತ್ತಿದೆ.
ಕ್ವಾರಂಟೈನ್‌ನಲ್ಲಿ ಮೂವರು ವಿದೇಶಿಗರು
ರಾಜ್ಯದ ಆರೋಗ್ಯ ಸಚಿವ ಶ್ಯಾಮ್ ಬಿಹಾರಿ ಜೈಸ್ವಾಲ್ ಮಾಹಿತಿ ನೀಡಿದ್ದು, ದುರ್ಗ್ ಪ್ರದೇಶದಲ್ಲಿ ಮೂವರು ಆಫ್ರಿಕನ್ ಪ್ರಜೆಗಳನ್ನು ಪ್ರತ್ಯೇಕ ನಿಗಾದಲ್ಲಿರಿಸಲಾಗಿದೆ. ಅವರ ಆರೋಗ್ಯ ಸ್ಥಿತಿಯನ್ನು ವೈದ್ಯಕೀಯ ತಂಡ ನಿರಂತರವಾಗಿ ಪರಿಶೀಲಿಸುತ್ತಿದ್ದು, ಈವರೆಗೆ ಯಾವುದೇ ಅನುಮಾನಾಸ್ಪದ ಲಕ್ಷಣಗಳು ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:
ಚಿಕಿತ್ಸೆಗೆ ಸರ್ಕಾರ ಸಂಪೂರ್ಣ ಸಿದ್ಧ
ಎಬೋಲಾ ಶಂಕಿತ ಪ್ರಕರಣಗಳು ಎದುರಾದರೆ ಚಿಕಿತ್ಸೆ, ಪ್ರತ್ಯೇಕ ವಾರ್ಡ್, ಕ್ವಾರಂಟೈನ್ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ರಾಜ್ಯ ಆರೋಗ್ಯ ಇಲಾಖೆ ಸಜ್ಜಾಗಿದೆ. ಸಾರ್ವಜನಿಕರ ಸುರಕ್ಷತೆಗಾಗಿ ವಿಶೇಷ ಸಹಾಯವಾಣಿ ವ್ಯವಸ್ಥೆಯನ್ನೂ ಆರಂಭಿಸಲಾಗಿದೆ.
ಬೆಂಗಳೂರಿನಲ್ಲೂ ನಡೆದಿತ್ತು ಪರೀಕ್ಷೆ
ಇದಕ್ಕೂ ಮೊದಲು ಉಗಾಂಡಾದಿಂದ ಬಂದಿದ್ದ ಇಬ್ಬರು ಮಹಿಳೆಯರನ್ನು ಬೆಂಗಳೂರಿನಲ್ಲಿ ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಸೋಂಕಿನ ಯಾವುದೇ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಅವರಿಗೆ ನೆಗೆಟಿವ್ ವರದಿ ಬಂದಿತ್ತು.
ಸದ್ಯ ಸೋಂಕು ದೃಢಪಟ್ಟ ಪ್ರಕರಣಗಳಿಲ್ಲದಿದ್ದರೂ, ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಕಟ್ಟುನಿಟ್ಟಿನ ನಿಗಾ ಮುಂದುವರಿಸಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಪರಿಸ್ಥಿತಿಯನ್ನು ಸಮೀಪದಿಂದಲೇ ಗಮನಿಸುತ್ತಿದ್ದಾರೆ.



