June 6, 2026
Saturday, June 6, 2026
spot_img

ತವರಿಗೆ ಬಂದ ಉಪಮುಖ್ಯಮಂತ್ರಿ ಪರಮೇಶ್ವರ್‌ಗೆ ಭರ್ಜರಿ ಸ್ವಾಗತ: ಮುಗಿಲು ಮುಟ್ಟಿದ ಕಾರ್ಯಕರ್ತರ ಸಂಭ್ರಮಾಚರಣೆ

ಹೊಸದಿಗಂತ ವರದಿ ತುಮಕೂರು:

ಎರಡನೇ ಬಾರಿ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆ ತುಮಕೂರಿಗೆ ಆಗಮಿಸಿದ ಡಾ. ಜಿ. ಪರಮೇಶ್ವರ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದರು. ನಗರದ ವಿವಿಧ ಭಾಗಗಳಲ್ಲಿ ಬೈಕ್ ರ‍್ಯಾಲಿ, ಪಟಾಕಿ ಸಿಡಿಸುವುದು, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಲಾಯಿತು.

56 ಸಾವಿರ ಹುದ್ದೆಗಳ ಭರ್ತಿಗೆ ಚಾಲನೆ

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಪರಮೇಶ್ವರ್, ರಾಜ್ಯದಲ್ಲಿ ಸುಮಾರು 2.5 ಲಕ್ಷ ಹುದ್ದೆಗಳು ಖಾಲಿ ಇದ್ದು, ಮೊದಲ ಹಂತದಲ್ಲಿ 56 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಈಗಾಗಲೇ ಪ್ರಕ್ರಿಯೆ ಆರಂಭಿಸಿದೆ ಎಂದು ತಿಳಿಸಿದರು. ಇಲಾಖಾವಾರು ಅಧಿಸೂಚನೆಗಳನ್ನು ಹಂತ ಹಂತವಾಗಿ ಪ್ರಕಟಿಸಲಾಗುವುದು ಎಂದರು. ಖಾಸಗಿ ವಲಯದಲ್ಲಿಯೂ ಸ್ಥಳೀಯ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇದನ್ನೂ ಓದಿ:

ಚುನಾವಣೆಗೆ ಈಗಿನಿಂದಲೇ ಸಜ್ಜಾಗುವಂತೆ ಕರೆ

ಮುಂದಿನ ದಿನಗಳಲ್ಲಿ ಮಹಾನಗರ ಪಾಲಿಕೆ, ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳು ಎದುರಾಗಲಿರುವ ಹಿನ್ನೆಲೆಯಲ್ಲಿ ಕಾರ್ಯಕರ್ತರು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಕರೆ ನೀಡಿದರು. 2028ರ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿಸಿಕೊಂಡು ಈಗಿನಿಂದಲೇ ತಳಮಟ್ಟದಲ್ಲಿ ಪಕ್ಷವನ್ನು ಬಲಪಡಿಸಬೇಕಾಗಿದೆ ಎಂದು ಹೇಳಿದರು.

ಹಿರಿಯ ನಾಯಕರು ಭಾಗಿ

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ.ಎನ್. ರಾಜಣ್ಣ, ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಗೌಡ, ಶಾಸಕ ವೆಂಕಟೇಶ್ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !