June 7, 2026
Sunday, June 7, 2026
spot_img

WEATHER | ವರುಣನ ವಾರ್ನಿಂಗ್ ಜೋರಾಗಿದೆ: ಕರಾವಳಿಗೆ ಆರೆಂಜ್ ಅಲರ್ಟ್, 10 ಜಿಲ್ಲೆಗಳಿಗೆ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳಲ್ಲಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿಶೇಷವಾಗಿ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಕರಾವಳಿಗೆ ಆರೆಂಜ್ ಅಲರ್ಟ್

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಹಾಗೂ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗುಡುಗು-ಮಿಂಚಿನೊಂದಿಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಈ ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇದನ್ನೂ ಓದಿ:

10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಮತ್ತು ರೈತರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಉತ್ತರ ಒಳನಾಡಿನಲ್ಲೂ ಮಳೆಯ ಪ್ರಭಾವ

ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !