Friday, September 5, 2025

ಭೋವಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ: ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್‌ ರಾಜೀನಾಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ಭೋವಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವೆಂಕಟೇಶ್ ಅವರು ಸುದ್ದಿಗೋಷ್ಠಿ ನಡೆಸಿ, ಭ್ರಷ್ಟಾಚಾರದ ಬಗ್ಗೆ ಗಂಭೀರ ಆರೋಪ ಮಾಡಿದರು.ಈ ಪ್ರಕರಣ ರಾಜಕೀಯವಾಗಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸಿಎಂ, ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ