July 26, 2026
Sunday, July 26, 2026
spot_img

WEATHER | ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ, ಇಂದು 19 ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಆರಂಭವಾಗಿದ್ದು, ರಾಜ್ಯದ ೧೯ ಜಿಲ್ಲೆಗಳಲ್ಲಿ ಮಳೆಯ ಎಫೆಕ್ಟ್‌ ಜೋರಾಗಿ ಇರಲಿದೆ.

ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಬೆಂಗಳೂರು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.ಕರಾವಳಿ ಭಾಗದ ಜಿಲ್ಲೆಗಲಲ್ಲಿ ಭಾರೀ ಮಳೆಯ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !