October 9, 2026
Friday, October 9, 2026
spot_img

ವಿಜಯಪುರದಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ : ಮೂವರಿಗೆ ಗಂಭೀರ ಗಾಯ

ದಿಗಂತ ವರದಿ ವಿಜಯಪುರ:

ಅನುಮಾಸ್ಪದ ವಸ್ತು ಸ್ಫೋಟಗೊಂಡು ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ನಡೆದಿದೆ.

ಇಲ್ಲಿನ ಪಾನ್‌ಶಾಪ್ ಅಂಗಡಿಯಲ್ಲಿ ಅನುಮಾಸ್ಪದ ವಸ್ತು ಸ್ಫೋಟಗೊಂಡಿದ್ದು, ಮೂವರು ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರ ಹೆಸರು ಹಾಗೂ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ. ಬಬಲೇಶ್ವರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Must Read