ಹೊಸದಿಗಂತ ವರದಿ ಬೆಳಗಾವಿ :
ಬೆಳಗಾವಿ ಜಿಲ್ಲೆಯಲ್ಲಿ ಮಧ್ಯಾಹ್ನದಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ರಸ್ತೆಗಳಲ್ಲಿ ನೀರು ನಿಂತಿದ್ದು, ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಿದೆ.
ಮಳೆ ನೀರು ಅಂಗಡಿ-ಮುಂಗಟ್ಟುಗಳಿಗೆ ನುಗ್ಗಿರುವುದರಿಂದ ವ್ಯಾಪಾರಸ್ಥರು ಭಾರೀ ನಷ್ಟ ಅನುಭವಿಸಿದ್ದಾರೆ. ಕೆಲವು ಕಡೆಗಳಲ್ಲಿ ದ್ವಿಚಕ್ರ ವಾಹನಗಳು ಮಳೆ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿರುವ ಘಟನೆಗಳು ನಡೆದಿವೆ.
ಇದನ್ನೂ ಓದಿ:
ಬೆಳಗಾವಿ ನಗರ ಹಾಗೂ ಬೈಲಹೊಂಗಲ ಪ್ರದೇಶಗಳಲ್ಲಿ ಮಳೆಯಿಂದಾಗಿ ಹೆಚ್ಚಿನ ಹಾನಿಯಾಗಿದೆ. ಮನೆಗಳು, ಅಂಗಡಿಗಳು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಭಾರೀ ಮಳೆಯಿಂದ ಕಂಗೆಟ್ಟಿರುವ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಸ್ಥಳೀಯ ಆಡಳಿತವು ತ್ವರಿತ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.



