June 8, 2026
Monday, June 8, 2026
spot_img

‘ತಾಯಿಗೊಂದು ಸಸಿ’ ಅಭಿಯಾನಕ್ಕೆ ರಾಜಕೀಯ ಸ್ಪರ್ಶ: ಗೆಲುವಿನ ಮಂತ್ರ ಜಪಿಸಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ. ಸಿದ್ದಾರ್ಥ್

ಹೊಸದಿಗಂತ ವರದಿ ಚಿತ್ರದುರ್ಗ:

ಮುಂಬರುವ 2028ರ ವಿಧಾನಸಭಾ ಚುನಾವಣೆ ಮತ್ತು ಪಂಚಾಯತ್ ಚುನಾವಣೆಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಬೇಕು. ಇದಕ್ಕೆ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ. ಸಿದ್ದಾರ್ಥ್ ಗುಂಡಾರ್ಪಿ ಪಕ್ಷದ ಮುಖಂಡರಿಗೆ ಮತ್ತು ಕಾರ್ಯಕರ್ತರಿಗೆ ಕರೆ ನೀಡಿದರು.

ಚಿತ್ರದುರ್ಗ ಭಾರತೀಯ ಜನತಾ ಪಾರ್ಟಿಯ ಸಹಯೋಗದಲ್ಲಿ ಗ್ರಾಮಾಂತರ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ’ತಾಯಿಗೊಂದು ಸಸಿ’ ಎಂಬ ಹೆಸರಿನಲ್ಲಿ ಮತ್ತು ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಿ 12 ವರ್ಷ ಪೂರೈಸಿದ ಸವಿ ನೆನಪಿಗಾಗಿ ಚಿತ್ರದುರ್ಗ ತಾಲ್ಲೂಕಿನ ಹುಲ್ಲೂರು ಸಿದ್ದಪ್ಪ ದೇವಾಲಯದ ಆವರಣ ಸ್ವಚ್ಚತಾ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನರೇಂದ್ರ ಮೋದಿಯವರ ಗುಜರಾತ್ ರಾಜ್ಯದ ಮುಖ್ಯಮಂತ್ರಿಗಳಾಗಿ 13 ವರ್ಷ ಹಾಗೂ ದೇಶದ ಪ್ರಧಾನ ಮಂತ್ರಿಗಳಾಗಿ 12 ವರ್ಷ ಯಶಸ್ವಿಯಾಗಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಕಾರ್ಯವನ್ನು ನಿರ್ವಹಿಸಿದ್ದಾರೆ. ಕೇಂದ್ರದ ಎನ್.ಡಿ.ಎ ಸರ್ಕಾರದ 12 ವರ್ಷದ ಸಾಧನೆಯನ್ನು ಮತದಾರರಿಗೆ ತಿಳಿಸುವಂತ ಕಾರ್ಯವನ್ನು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನು ಮಾಡಬೇಕಿದೆ, ದೇಶದಲ್ಲಿ ಬಹುತೇಕ ರಾಜ್ಯಗಳಲ್ಲಿ ನಮ್ಮ ಪಕ್ಷದ ಅಧಿಕಾರವನ್ನು ನಡೆಸುತ್ತಿದೆ, ಈ ಹಿನ್ನಲೆಯಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಸಹಾ ಬಿಜೆಪಿ ಪಕ್ಷ ಅಧಿಕಾರಕ್ಕೆ ತರುವಂತ ಕೆಲಸವನ್ನು ನಾವೆಲ್ಲರೂ ಸೇರಿ ಮಾಡಬೇಕಿದೆ ಎಂದರು.

ಇದನ್ನೂ ಓದಿ:

ವಿಶ್ವ ಪರಿಸರ ದಿನಾಚರಣೆ ಮತ್ತು ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಿ 12 ವರ್ಷ ಪೂರೈಸಿದ ಸವಿ ನೆನಪಿಗಾಗಿ ಇಡೀ ದೇಶದಲ್ಲಿ ಬಿಜೆಪಿ ಮಂಡಲ ವ್ಯಾಪ್ತಿಯಲ್ಲಿ ಪ್ರಸಿದ್ಧ ಸ್ಥಳಗಳಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಗುತ್ತಿದೆ. ತಾಯಿಗೊಂದು ಸಸಿ ಎಂಬ ಹೆಸರಿನಲ್ಲಿ ಇಡೀ ದೇಶದಲ್ಲಿಯೇ ಈ ಎರಡು ಕಾರ್ಯ ಕ್ರಮಗಳು ಯಶಸ್ವಿಯಾಗಿ ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರತಿ ದಿನ ಒಂದೊಂದು ಕಡೆ ಸ್ವಚ್ಚತಾ ಕಾರ್ಯಕ್ರಮದ ಜೊತೆಯಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಹೇಳಿದರು.

ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದ ಗ್ರಾಮಾಂತರ ವ್ಯಾಪ್ತಿಯ ಹುಲ್ಲೂರು-ಸಿಂಗಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಪ್ರಸಿದ್ಧ ಹಾಗೂ ಪುರಾತನ ಕಾಲದ ದೇವಾಲಯವಾದ ಶ್ರೀ ಸಿದ್ದಪ್ಪ ದೇವಸ್ಥಾನ ಸ್ವಚ್ಚತಾ ಕಾರ್ಯಕ್ರಮ ಹಾಗೂ ಸಸಿ ನೆಡುವ ಕಾರ್ಯಕ್ರಮ ನಡೆಸಲಾಯಿತು.

ಗ್ರಾಮಾಂತರ ಮಂಡಲದ ಅಧ್ಯಕ್ಷ ನಾಗರಾಜ್ ನೇತೃತ್ವ ವಹಿಸಿದ್ದರು. ದಲ್ಲಿ ಮಂಡಲದ ಉಪಾಧ್ಯಕ್ಷರಾದ ಸಿರಿಯಣ್ಣ, ಶ್ರೀಧರ್, ಜಿಲ್ಲಾ ಬಿಜೆಪಿಯ ಪ್ರದಾನ ಕಾರ್ಯದರ್ಶಿ ಮೋಹನ್ ಹಾಗೂ ಎಲ್ಲಾ ಮೋರ್ಚಾದ ಅಧ್ಯಕ್ಷರು, ಪದಾಧಿಕಾರಿಗಳ ಜೊತೆಯಲ್ಲಿ ಪಕ್ಷದ ಕಾರ್ಯಕರ್ತರು, ಗ್ರಾಮದ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !