July 26, 2026
Sunday, July 26, 2026
spot_img

WEATHER | ಮುಂದಿನ ಮೂರು ದಿನ ಭಾರೀ ಮಳೆ, ರಾಜ್ಯದ ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ನೈಋತ್ಯ ಮುಂಗಾರು ತೀವ್ರಗೊಂಡಿದ್ದು, ಇನ್ನೂ ಮೂರು ದಿನ ವರುಣನ ಅಬ್ಬರ ಜೋರಾಗಿದೆ. ಚಿಕ್ಕಮಗಳೂರು ಸೇರಿದಂತೆ ಐದು ಜಿಲ್ಲೆಗಳಲ್ಲಿ ಅಬ್ಬರದ ಮಳೆಯಾಗಲಿದ್ದು, ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯಲಿದ್ದು, ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನು ಬೆಳಗಾವಿ, ಧಾರವಾಡ, ಹಾವೇರಿ, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ನೀಡಲಾಗಿದ್ದು, ಇಲ್ಲೂ ಭಾರಿ ಮಳೆಯಾಗಲಿದೆ. ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಹಿನ್ನೆಲೆ 24 ಗಂಟೆ ಸಹಾಯವಾಣಿ ಆರಂಭವಾಗಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿ ತೀರ ಹಾಗೂ ತಗ್ಗು ಪ್ರದೇಶಗಳಿಗೆ ತೆರಳದಂತೆ ಸೂಚನೆ ನೀಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !