October 12, 2026
Monday, October 12, 2026
spot_img

WEATHER | ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರು, ಇನ್ನೂ ಆರು ದಿನ ಜೋರು ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಇನ್ನೂ ಆರು ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಅದರಲ್ಲಿಯೂ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಮಗಳೂರಿನಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Must Read