ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ 2 ದಿನಗಳಿಂದ ಅವರು ಅಸ್ವಸ್ಥರಾಗಿದ್ದ ಅವರು ಔಷಧಿಗಳನ್ನ ತೆಗೆದುಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆದ್ರೆ, ಯಾವುದೇ ಸುಧಾರಣೆ ಇಲ್ಲದ ಕಾರಣ, ಅವರನ್ನು ಇಂದು ಆಸ್ಪತ್ರೆಗೆ ದಾಖಲಿಸಲಾಯಿತು.
ಮೂಲಗಳ ಪ್ರಕಾರ, ವೈರಲ್ ಜ್ವರ ಮತ್ತು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.