September 6, 2026
Sunday, September 6, 2026
spot_img

WEATHER | ಮುಂಗಾರು ಅಬ್ಬರ ಜೋರು, ಇಂದು ನಾಳೆ ರಾಜ್ಯದಲ್ಲಿ ಬಿರುಗಾಳಿ ಸಹಿತ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಜೂ. 13ರವರೆಗೆ ಹಲವೆಡೆ ಬಿರುಗಾಳಿ ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು ಸೇರಿದಂತೆ, ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಅತಿ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ಹೇಳಲಾಗಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !